Karnataka Loksabha Polls 2024

ಕೊಡಗು: ಮಡಿಕೇರಿಯಲ್ಲಿ ಯದುವೀರ್ ಒಡೆಯರ್ ಅದ್ದೂರಿ ರೋಡ್ ಶೋ!
ವಿರಾಜಪೇಟೆ ಮತ್ತು ಮಡಿಕೇರಿಯಲ್ಲಿ ಮೈಸೂರು-ಕೊಡಗು ಎನ್ ಡಿಎ ಅಭ್ಯರ್ಥಿ ಯದುವೀರ್ ಒಡೆಯರ್ ಭರ್ಜರಿ ರೋಡ್ ಶೋ ನಡೆಸಿದರು.

ಹಿರಿಯ ನಾಗರಿಕರು, ವಿಶೇಷ ಚೇತನ ಮತದಾರರಿಗೆ 'ರ‍್ಯಾಪಿಡೋ' ಉಚಿತ ಪ್ರಯಾಣದ ಆಫರ್!
"ಸವಾರಿಜಿಮ್ಮದರಿಕಿ" ಉಪಕ್ರಮದ ಭಾಗವಾಗಿ ರಾಜ್ಯದ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಬೈಕ್ , ಟ್ಯಾಕ್ಸಿ, ಆಟೋ ಮತ್ತು ಕ್ಯಾಬ್ ಗಳಲ್ಲಿ ತೆರಳುವ ಅವಕಾಶ ಮಾಡಿಕೊಡಲಾಗುವುದು ಎಂದು 'ರ‍್ಯಾಪಿಡೋ' ಬುಧವಾರ ಹೇಳಿದೆ.

ಲೋಕಸಭಾ ಚುನಾವಣೆ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎರಡು ಪಟ್ಟು ಹೆಚ್ಚಿನ ಅರೆಸೇನಾ ಪಡೆ ನಿಯೋಜನೆ!
ಏಪ್ರಿಲ್ 26 ರಂದು ಕರ್ನಾಟಕ ಮೊದಲ ಹಂತದ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳನ್ನು ವೆಬ್‌ಕಾಸ್ಟ್ ಮಾಡಲಾಗುವುದು ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

ಮಾಜಿ MLC ಕೆ.ಪಿ. ನಂಜುಂಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ!
ವಿಶ್ವಕರ್ಮ ಸಮಾಜದ ಮುಖಂಡ ಕೆ. ಪಿ. ನಂಜುಂಡಿ ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜಿವಾಲ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು.

ಕರ್ನಾಟಕದಲ್ಲಿ NDA ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ: ಅಮಿತ್ ಶಾ
ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪರ ರೋಡ್ ಶೋ ನಡೆಸಿದರು.

ಲೋಕಸಭಾ ಚುನಾವಣೆ: ಮತದಾನ ಕುರಿತು ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ
ಲೋಕಸಭಾ ಚುನಾವಣೆ-2024 ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯ ನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಚುನಾವಣಾ ಆಯೋಗ ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ ಯನ್ನು ಆಯೋಜಿಸಲಾಗಿದೆ.

ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅಮಾನತಿಗೆ ಬಿಜೆಪಿ ಒತ್ತಾಯ, ಆಯೋಗಕ್ಕೆ ದೂರು
ವಿಧಾನಸೌಧ ಆವರಣದದಲ್ಲಿರುವ ಗಾಂಧಿ ಪ್ರತಿಮೆ ಬಳಿ ತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟಂತಹ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಬಿಜೆಪಿ ನಿಯೋಗ ಇಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಲೋಕಸಭೆ ಚುನಾವಣೆ 2024: ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್, ರಕ್ಷಾ ರಾಮಯ್ಯ ನಡುವೆ ತೀವ್ರ ಪೈಪೋಟಿ
2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಮತ್ತು ಒಕ್ಕಲಿಗರ ಬೆಂಬಲದೊಂದಿಗೆ ಬಿಜೆಪಿ ಪ್ರಥಮ ಬಾರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ನಿಂದ ಕಸಿದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು.

ವಿಂಟೇಜ್ ಕಾರ್, ಬೈಕ್ ರ್‍ಯಾಲಿ ಮೂಲಕ ಮತದಾನ ಜಾಗೃತಿ: ರಾಜ್ಯಪಾಲರಿಂದ ಚಾಲನೆ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಮತದಾರರ ಜಾಗೃತಿ ಕಾರ್ ಹಾಗೂ ಬೈಕ್ ಗಳ ರ್‍ಯಾಲಿಗೆ ಚಾಲನೆ ನೀಡಿದರು.

