Karnataka Loksabha Polls 2024

ಜಯನಗರದಲ್ಲಿ ಕೋಟಿ ಕೋಟಿ ಹಣ ಪತ್ತೆ; ಕಾಂಗ್ರೆಸ್ ಗೆ ಸೋಲಿನ ಅರಿವು ಸ್ಪಷ್ಟ: ತೇಜಸ್ವಿ ಸೂರ್ಯ
ಚುನಾವಣಾ ಆಯೋಗ ಜಯನಗರದಲ್ಲಿ ಶನಿವಾರ ವಶಪಡಿಸಿಕೊಂಡಿರುವ ಕೋಟಿ, ಕೋಟಿ ಹಣ ಕಾಂಗ್ರೆಸ್ ಗೆ ಸೋಲಿನ ಅರಿವಾಗಿರುವುದರ ಸ್ಪಷ್ಟ ಸಂಕೇತವಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾಗಿರುವ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಪ್ರಧಾನಿ ಮೋದಿಯನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.

ಹಾಸನ: ರಾಜಕೀಯ ತಿರುವು ಪಡೆದುಕೊಳ್ತಾ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಘಟನೆ!
ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಜಿಲ್ಲಾ ಪೊಲೀಸರು ಬೆಂಬಲ ನೀಡಿದ್ದಾರೆ ಎಂದು ಹಾಸನ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆರೋಪಿಸಿದ್ದಾರೆ.

ಬಿಜೆಪಿಯವರು ಕತ್ರಿ ಹಾಕೋದ್ರಲ್ಲಿ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ
ಬಿಜೆಪಿಯವರು ಕತ್ರಿ ಹಾಕೋದ್ರಲ್ಲಿ ನಿಸ್ಸೀಮರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಭ್ರಷ್ಟಾಚಾರಿಗಳಿಗೆ ಕ್ಲೀನ್ ಚಿಟ್ ನೀಡುವ ವಾಷಿಂಗ್ ಮೆಷಿನ್‌ನಂತೆ ಕೆಲಸ: ಖರ್ಗೆ ಕಿಡಿ
ಪ್ರಧಾನಿ ಮೋದಿಯವರು ಭ್ರಷ್ಟಾಚಾರದ ವಿರುದ್ಧ ಹೋರಾಡುವುದಾಗಿ ಹೇಳುತ್ತಾರೆ, ಆದರೆ ಬಿಜೆಪಿ ಭ್ರಷ್ಟಾಚಾರ ಆರೋಪ ಹೊತ್ತವರಿಗೆ ಕ್ಲೀನ್ ಚಿಟ್ ನೀಡುವ ವಾಷಿಂಗ್ ಮೆಷಿನ್‌ನಂತೆ ಕೆಲಸ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

NDA ಗೆ ಕೇಂದ್ರದಲ್ಲಿ ಸರ್ಕಾರ ರಚಿಸುವಷ್ಟು ಸೀಟು ಬರಲ್ಲ: ಸಿಎಂ ಸಿದ್ದರಾಮಯ್ಯ
ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದಿದ್ದರೂ, ಕೇಂದ್ರದಲ್ಲಿ ಸರ್ಕಾರ ರಚಿಸಲು ಎನ್‌ಡಿಎಗೆ ಸಾಕಷ್ಟು ಸ್ಥಾನಗಳು ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಒಟ್ಟು 300 ಕೋಟಿ ರೂ. ಗೂ ಅಧಿಕ ಮೌಲ್ಯದ ನಗದು, ವಸ್ತುಗಳು ವಶ
ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಮಾರ್ಚ್ 16 ರಿಂದ ಈವರೆಗೆ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ರೂ.300 ಕೋಟಿಗೂ ಅಧಿಕ ಮೌಲ್ಯದ ನಗದು, ಮದ್ಯ, ಮಾದಕವಸ್ತು ಹಾಗೂ ಮತದಾರರಿಗೆ ಆಮಿಷವೊಡ್ಡಲು ಬಳಸುವ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳ ವಿತರಣೆ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ಸಹಿ ಇರುವ ಕಾಂಗ್ರೆಸ್‌ನ 'ಗ್ಯಾರೆಂಟಿ ಕಾರ್ಡ್'ಗಳನ್ನು ಮತದಾರರಿಗೆ ಹಂಚುವುದನ್ನು ತಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ (ಇಸಿಐ) ಬಿಜೆಪಿ ದೂರು ಸಲ್ಲಿಸಿದೆ.

ಕೆಪಿಸಿಸಿ ಅಧ್ಯಕ್ಷರ ರಾಜಕೀಯ, ಸಂವಹನ ಕಾರ್ಯದರ್ಶಿಯಾಗಿ ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ನೇಮಕ
ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

