karnataka police

ಗೌರಿ ಲಂಕೇಶ್ ಹತ್ಯೆ: ತನಿಖೆ ಚುರುಕು, ಘಟನಾ ಸ್ಥಳದಿಂದ ಸಿಸಿಟಿವಿ ದೃಶ್ಯಾವಳಿ ವಶಕ್ಕೆ!
ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದಾರೆ.

ಗೌರಿ ಲಂಕೇಶ್ ಹತ್ಯೆ: ಹೀನಕೃತ್ಯ ಎಸೆಗಿದವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಕಟು ಶಬ್ದಗಳಿಂದ ಟೀಕಿಸಿದ್ದು, ಇಂತಹ ಹೀನಕೃತ್ಯವನ್ನು ಎಸಗಿದವರನ್ನು ಪತ್ತೆ ಹಚ್ಚಿ ಖಂಡಿತಾ ಕಾನೂನಾತ್ಮಕವಾಗಿ ಶಿಕ್ಷಿಸಲಾಗುತ್ತದೆ ಎಂದು ಹೇಳಿದ್ದಾರೆ.
ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಗೌರಿ ಲಂಕೇಶ್!
ದುಷ್ಕರ್ಮಿಗಳ ಗುಂಡೇಟಿಗೆ ಎದೆಯೊಡ್ಡು ಸಾವನ್ನಪ್ಪಿದ್ದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.

ಯುವತಿಗೆ ಬಲವಂತವಾಗಿ ತಾಳಿ ಕಟ್ಟಿ ಅತ್ಯಾಚಾರ ಮಾಡಿದ ದುಷ್ಕರ್ಮಿ!
ಪತ್ನಿ ಮತ್ತು ಇಬ್ಬರು ಮಕ್ಕಳಿಂದ ದೂರಾಗಿದ್ದ ಓರ್ವ ವ್ಯಕ್ತಿ 22ರೆ ಹರೆಯದ ಯುವತಿಯೋರ್ವಳನ್ನು ಅಪಹರಿಸಿ ಆಕೆಗೆ ಬಲವಂತವಾಗಿ ತಾಳಿಕಟ್ಟಿ ಅತ್ಯಾಚಾರ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪತ್ನಿಗೆ ಪೊಲೀಸರಿಂದ ಕಿರುಕುಳ ಆರೋಪ; ಬೆಂಗಳೂರಿನಲ್ಲಿ ರೌಡಿ ಶೀಟರ್ ಕಾರ್ತಿಕ್ ಆತ್ಮಹತ್ಯೆ!
ಪೊಲೀಸರ ಕಿರುಕುಳ ತಾಳಲಾರದೇ ರೌಡಿ ಶೀಟರ್ ವೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

ಮಂಗಳೂರು ಘಟನೆಗಳಿಂದಾಗಿ ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆ: ಸಿಎಂ ಸಿದ್ದರಾಮಯ್ಯ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಇತ್ತೀಚಿನ ಕೆಲ ಗಲಭೆಗಳಿಂದಾಗಿ ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಮೃತ ಶರತ್ ನಿಮ್ಮ ಮಗನೆಂದು ಭಾವಿಸಿ ನಿಷ್ಪಕ್ಷಪಾತ ತನಿಖೆ ನಡೆಸಿ: ಡಿವಿ ಸದಾನಂದ ಗೌಡ ಮನವಿ
ಇತ್ತೀಚೆಗೆ ಕೊಲೆಗೀಡಾದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ತಮ್ಮ ಮಗನೆಂದು ಭಾವಿಸಿ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಹೇಳಿದ್ದಾರೆ.

ಮೈಸೂರು: ಮರ್ಯಾದಾ ಹತ್ಯೆ ಪ್ರಕರಣ; ಪೋಷಕರು ಸೇರಿ 5 ಬಂಧನ
19 ವರ್ಷದ ಯುವತಿಯ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೋಷಕರು ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಸೋಮವಾರ ಬಂಧನಕ್ಕೊಳಪಡಿಸಲಾಗಿದೆ...

ಪಾಕ್ ಗೆ ಗೆಲುವು: ಕಾಶ್ಮೀರದಲ್ಲಿ ಮಾತ್ರವಲ್ಲ, ಕರ್ನಾಟಕದಲ್ಲೂ ಸಂಭ್ರಮ!
ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ನಲ್ಲಿ ಪಾಕಿಸ್ತಾನ ತಂಡ ಗೆಲುವು ಸಾಧಿಸಿದ ಬೆನ್ನಲ್ಲೇ ಕಾಶ್ಮೀರದಲ್ಲಿ ನಡೆದ ಸಂಭ್ರಮಾಚರಣೆ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಅಂತುಹುದೇ ಮತ್ತೊಂದು ಪ್ರಕರಣ ಕರ್ನಾಕದಲ್ಲಿ ಬೆಳಕಿಗೆ ಬಂದಿದೆ.

