Karnataka politics

ಆ ಮೆಂಟಲ್ ಬಗ್ಗೆ ನನ್ನ ಕೇಳಬೇಡ್ರಿ; ನೀವ್ಯಾಕೆ ದಿನಾ ಆ ವ್ಯಕ್ತಿಗೆ ಮೈಕ್ ಹಿಡೀತೀರಾ: ಮಾಧ್ಯಮ ವಿರುದ್ಧ ಪ್ರತಾಪ್ ಸಿಂಹ ಗರಂ!
ಮಾಜಿ ಸಂಸದ ಪ್ರತಾಪ್ ಸಿಂಹ ಮುಟ್ಟಾಳ, ನಾಲಾಯಕ್, ನಾಮರ್ದ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಗೆ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಂಹ, ಮಾಧ್ಯಮ ವಿರುದ್ಧವೇ ಗರಂ ಆಗಿದ್ದಾರೆ.

ಪರಮೇಶ್ವರ್ ಬಗ್ಗೆ ಸಿದ್ದರಾಮಯ್ಯಗೆ ವಿಶೇಷ ಅಂತಃಕರಣ; ಏನೀ ಹೊಸ ರಾಜಕೀಯ ಸಮೀಕರಣ? ಇಬ್ಬರ ಆಪ್ತತೆ ಕಂಡು ದಂಗಾಯ್ತು ರಾಜ್ಯ ರಾಜಕಾರಣ!
ಸಿದ್ದರಾಮಯ್ಯ ಬಸವಣ್ಣ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಸಾಕಾರಗೊಳಿಸಿದ್ದಾರೆ ಎಂದು ಡಾ. ಪರಮೇಶ್ವರ್ ಸಿದ್ದರಾಮಯ್ಯ ಜೊತೆಗಿರುವ ಫೋಟೋವನ್ನು ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ.

'ಅಹಿಂದ ಯಾರ ಆಸ್ತಿಯೂ ಅಲ್ಲ'.. ಕರೆಯದೇ ಹೇಗೆ ಹೋಗಲಿ?: ಗುರುವಿನ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಗರಂ!
ಹಿಂದುಳಿದ ವರ್ಗಗಳ ಸಮಾವೇಶ ಗಂಭೀರವಾಗಿ ತಗೋಬೇಕಿಲ್ಲ. ಅಹಿಂದ ಯಾರ ಆಸ್ತಿಯೂ ಅಲ್ಲ. ಯಾರು ಬೇಕಾದರೂ ಅಹಿಂದ ಸಮಾವೇಶವನ್ನು ಮಾಡಬಹುದು. ನನ್ನನ್ನು ಯಾಕೆ ಕರೆದಿಲ್ಲ ಅಂತಾ ಆಯೋಜಕರನ್ನೇ ಕೇಳಿ’ ಎಂದಿದ್ದಾರೆ.

2028ರ ಚುನಾವಣೆಗೆ ರಾಜ್ಯ ರಾಜಕಾರಣಕ್ಕೆ ವಾಪಸ್; ಯಾರ ಗೂಟ ಇರುತ್ತೆ? ಜನ ಯಾರ ಗೂಟ ಕಿತ್ತಾಕ್ತಾರೆ ನೋಡೋಣ: HDK
ಈ ಹಿಂದೆ ಇದ್ದ ಕೆಪಿಎಸ್ ಸಿ ಅಧ್ಯಕ್ಷರನ್ನು 53 ದಿನಗಳ ಕಾಲ ಜೈಲಿಗೆ ಕಳುಹಿಸಿದಿರಿ, ಆದರೆ ಕೋರ್ಟ್ ಏನು ಹೇಳ್ತು, ನಿಮ್ಮ ಯೊಗ್ಯತೆಗೆ ಒಂದೇ ಒಂದು ದಾಖಲೆ ನೀಡಿಲ್ಲ ಎಂದು ಲೇವಡಿ ಮಾಡಿದರು.

ಕರ್ನಾಟಕ ರಾಜಕೀಯದಲ್ಲಿ ಇತ್ತೀಚಿನ ಬೆಳವಣಿಗೆ ಏನು?: ಸಿದ್ದರಾಮಯ್ಯ ನಿವಾಸಕ್ಕೆ ಸಾಲು ಸಾಲು ಬಿಜೆಪಿ ನಾಯಕರ ಭೇಟಿ!
ಬುಧವಾರ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಿದ್ದರಾಮಯ್ಯರನ್ನ ಭೇಟಿ ಮಾಡಿ ಕೆಲ ಕಾಲ ಚರ್ಚಿಸಿದ್ದರು. ಇದರ ಬೆನ್ನಲ್ಲೇ ನಿನ್ನೆ ಗುರುವಾರ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ಮಾಜಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಆಗಮಿಸಿ ಕೆಲಹೊತ್ತು ಮಾತುಕತೆ ನಡೆಸಿದರು.

ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ವಿರೋಧಿಸಿ ಕರ್ನಾಟಕ ಬಿಜೆಪಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ 10 ದಿನಗಳ ಪಾದಯಾತ್ರೆ ಕೈಗೊಳ್ಳಲಿದೆ ಎಂದು ಪಕ್ಷದ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ಸಿದ್ದರಾಮಯ್ಯರ ಮುಂದಿನ ಹಾದಿ ಏನು…. (ನೇರ ನೋಟ)
ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟ ನಂತರ ರಾಜಕೀಯ ವಿದ್ಯಮಾನಗಳ ಕುರಿತು ಪ್ರತಿಕ್ರಿಯಿಸುತ್ತಿಲ್ಲ. ಶಾಸಕಾಂಗ ಪಕ್ಷದ ಸಭೆಯಿಂದಲೂ ದೂರ ಉಳಿದರು. ಆದರೆ, ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡರು.

ಹೈಕಮಾಂಡ್ ಅತಿಯಾದ ಹಸ್ತಕ್ಷೇಪವೇ ಡಿಕೆಶಿಗೆ ಸಂಕಟ (ನೇರ ನೋಟ)
ಮುಖ್ಯಮಂತ್ರಿಯಾಗಿ ಶಿವಕುಮಾರ್ ಹುರುಪಿನಿಂದಲೇ ಅಧಿಕಾರ ಸ್ವೀಕರಿಸಿದರು. ಮುಖ್ಯಮಂತ್ರಿ ಹುದ್ದೆ ಪಡೆಯಲು ಅವರ ತಾಳ್ಮೆ, ನಡೆಯೂ ಗಮನಾರ್ಹವೇ. ಆದರೆ, ಹೈಕಮಾಂಡ್ ಶಿವಕುಮಾರ್ ಕೈ ಕಟ್ಟಿ ಹಾಕಿದೆ. ಶಿವಕುಮಾರ್ ಅವರದು ಈಗ ಹೈಕಮಾಂಡ್ ಮುಂದೆ ಕೈಕಟ್ಟಿ ನಿಲ್ಲಬೇಕಾದ ಸ್ಥಿತಿ.

ಅನುಭವ ಇಲ್ಲದ ಮಂಗನಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ: ಯತೀಂದ್ರ ಬಗ್ಗೆ ವಿಶ್ವನಾಥ್ ಲೇವಡಿ
ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲು ರಾಜ್ಯ ಸರ್ಕಾರ 30 ಸಚಿವರನ್ನು ನಿಯೋಜಿಸಿ ಅಧಿಕೃತ ಆದೇಶ ಹೊರಡಿಸಿದೆ.

