Karnataka politics

ಸರ್ಕಾರದ ಪುನರಚನೆ, ಸಂಪುಟ ವಿಸ್ತರಣೆ ಯಾವುದೂ ಇಲ್ಲ: ಸಿದ್ದರಾಮಯ್ಯ
ರಾಜ್ಯ ಸರ್ಕಾರ ಪುನರಚನೆ ಅಥವಾ ಸಂಪುಟ ವಿಸ್ತರಣೆ ಯಾವುದೂ ಇಲ್ಲ. ಎಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಮೈತ್ರಿ ಸಹವಾಸ ಸಾಕಾಗಿದೆ, ಹೊರಬರುವುದೇ ಉತ್ತಮ: ತುಮಕೂರು ಜೆಡಿಎಸ್ ಶಾಸಕ
ಚುನಾವಣಾ ಫಲಿತಾಂಶ ಪ್ರಕಟವಾಗಿ 3 ದಿನಗಳು ಕಳೆದ ಬಳಿಕವೂ ಜೆಡಿಎಸ್-ಕಾಂಗ್ರೆಸ್ ಸೋಲಿನ ಬೇನೆಯಿಂದ ಇನ್ನೂ ಹೊರಬಂದಿಲ್ಲ.

ರಾಜೀನಾಮೆ ಕೊಡಲು ಕುಮಾರಸ್ವಾಮಿ ನಿರ್ಧಾರ, ತಡೆದ ರಾಹುಲ್ ಗಾಂಧಿ
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆಗೆ ನೀಡಲು ನಿರ್ಧರಿಸಿದ್ದರು ಎನ್ನಲಾಗಿದೆ.

ಇವಿಎಂ ಬಗ್ಗೆ ಮೊದಲು ಅನುಮಾನ ವ್ಯಕ್ತಪಡಿಸಿದ್ದೇ ಬಿಜೆಪಿ; ಸಿದ್ದರಾಮಯ್ಯ
ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಭುಗಿಲೆದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇವಿಎಂ ಬಗ್ಗೆ ಮೊದಲು ಅನುಮಾನ ವ್ಯಕ್ತಪಡಿಸಿದ್ದೇ ಬಿಜೆಪಿ ಪಕ್ಷ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಭರ್ಜರಿ ತಿರುಗೇಟು ನೀಡಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ಬೆನ್ನಲ್ಲೇ ಆಪರೇಷನ್ ಕಮಲಕ್ಕೆ ರೋಷನ್ ಬೇಗ್ ಮೊದಲ ಹಿಟ್ ವಿಕೆಟ್?
ಚುನಾವಣೋತ್ತರ ಸಮೀಕ್ಷೆ ಬಹಿರಂಗವಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ತರ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಆಪರೇಷನ್ ಕಮಲಕ್ಕೆ ಬಿಜೆಪಿ ಚಾಲನೆ ನೀಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೆರೆದಂತಹ ನಾಯಕರು ಎಲ್ಲವನ್ನು ಕಳೆದುಕೊಂಡು ಮೂಲೆ ಸೇರಿದ್ದಾರೆ: ಶ್ರೀರಾಮುಲು
ಕಾಂಗ್ರೆಸ್ ಹಿರಿಯ ಶಾಸಕ ರೋಷನ್ ಬೇಗ್ ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿ ಬಿದ್ದಿರುವುದು ಸರಿಯಾಗಿಯೇ ಇದೆ. ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ಕಾಲಕ್ಕೆ ತಕ್ಕಂತೆ ತಗ್ಗಿಬಗ್ಗಿ ನಡೆಯಬೇಕು ಎಂದು ಬಿಜೆಪಿ ಶಾಸಕ ಶ್ರೀರಾಮುಲು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ರೋಷನ್ ಬೇಗ್ ಹೇಳಿಕೆಗೆ ಯು ಟಿ ಖಾದರ್ ವಿರೋಧ
ಕಾಂಗ್ರೆಸ್ ಪಕ್ಷ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿರುವ ಹಿರಿಯ ಶಾಸಕ ರೋಷನ್ ಬೇಗ್ ಅವರ ವಿರುದ್ಧ ಯುಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೋಷನ್ ಬೇಗ್ ಹೇಳಿಕೆ ಬೆನ್ನಲ್ಲೆ ಮುಖ್ಯಮಂತ್ರಿ ಜೊತೆ ಕಾಂಗ್ರೆಸ್ ನಾಯಕರ ಮಹತ್ವದ ಸಭೆ
ಮಾಜಿ ಸಚಿವ ರೋಷನ್ ಬೇಗ್ ಕಾಂಗ್ರೆಸ್ ನಾಯಕರ ವಿರುದ್ದ ಅಸಮಾಧಾನ ಹೊರ ಹಾಕಿದ ಬೆನ್ನಲ್ಲೆ ಕಾಂಗ್ರೆಸ್ ನಾಯಕರು ಹಾಗೂ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಜೊತೆ ಖಾಸಗಿ ಹೋಟೇಲಿನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸುಮಲತಾ ವಿರುದ್ದ ರೇವಣ್ಣ ಹೇಳಿಕೆ; ಕ್ಷಮೆ ಕೇಳಿದ ಸಿಎಂ ಕುಮಾರಸ್ವಾಮಿ!
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ವಿಚಾರವಾಗಿ ನಟಿ ಸುಮಲತಾ ಅಂಬರೀಶ್ ವಿರುದ್ಧ ಸಚಿವ ರೇವಣ್ಣ ನೀಡಿದ್ದ ಹೇಳಿಕೆ ವಿಚಾರವಾಗಿ ಸಿಎಂ ಕುಮಾರಸ್ವಾಮಿ ಕ್ಷಮೆ ಯಾಚಿಸಿದ್ದಾರೆ.

