Karnataka politics

ಜೆಡಿಎಸ್ ಗೆ ನಟ ಕಿಚ್ಚಾ ಸುದೀಪ್ ಸೇರ್ಪಡೆ ಕುರಿತು ದೇವೇಗೌಡರು ಏನು ಹೇಳಿದರು ಗೊತ್ತಾ?
ದಕ್ಷಿಣ ಭಾರತದ ಖ್ಯಾತ ನಟ ಕಿಚ್ಚಾ ಸುದೀಪ್ ಜಾತ್ಯಾತೀತ ಜನತಾ ದಳ ಪಕ್ಷ ಸೇರುವ ಸಂಬಂಧ ಮಾತುಕತೆ ನಡೆಸಲಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ ಎಂದು ವರದಿಯಾಗಿದೆ.

ವಿವಿಧ ಧರ್ಮಗಳನ್ನು ಗೌರವಿಸುವುದೇ ಜಾತ್ಯಾತೀತತೆ: ಅನಂತ್ ಕುಮಾರ್ ಹೆಗ್ಡೆಗೆ ಪ್ರಕಾಶ್ ರೈ ಪತ್ರ ಪ್ರಹಾರ!
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಜ್ಯಾತ್ಯಾತೀತ ಹೇಳಿಕೆ ವಿವಾದದ ಸ್ವರೂಪ ಪಡೆದ ಬೆನ್ನಲ್ಲೇ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದು, ಜಾತ್ಯಾತೀತ ಎಂದರೆ ವಿವಿಧ ಧರ್ಮಗಳನ್ನು ಗೌರವಿಸುವುದು ಎಂದು ಪಾಠ ಮಾಡಿದ್ದಾರೆ.

ಗುಜರಾತ್ ಚುನಾವಣೆ ಬಳಿಕ ಅತೀ ದೊಡ್ಡ ಹಗರಣದ ದಾಖಲೆ ಬಿಡುಗಡೆ: ಎಚ್ ಡಿ ಕುಮಾರಸ್ವಾಮಿ
ಗುಜರಾತ್ ಚುನಾವಣೆ ಬಳಿಕ 'ಮೈಸೂರು ಮಿನರಲ್ಸ್ ಕಂಪನಿ'ಯಲ್ಲಿ ನಡೆದ ದೊಡ್ಡ ಭ್ರಷ್ಟಾಚಾರದ ಹಗರಣದ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಹೆಣ್ಣುಮಕ್ಕಳ ಶಾಪ ಒಳ್ಳೆಯದಲ್ಲ: ಬಿಎಸ್ ವೈಗೆ ವಿನಯ್ ಪತ್ನಿ ಶೋಭಾ ಪತ್ರ!
ನಿಮಗೂ ಹೆಣ್ಣು ಮಕ್ಕಳು, ಸೊಸೆಯರಿದ್ದಾರೆ... ಅವರಿಗೂ ಹೀಗೆ ಆದರೆ ಸುಮ್ಮನಿರುತ್ತೀರಾ? ಹೆಣ್ಣುಮಕ್ಕಳ ಶಾಪ ಒಳ್ಳೆಯದಲ್ಲ ಎಂದು ಬಿಜೆಪಿ ಮಾಧ್ಯಮ ಸಹಸಂಚಾಲಕ ವಿನಯ್ ಅವರ ಪತ್ನಿ ಶೋಭಾ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಒವೈಸಿಯ ಎಐಎಂಎಂ ಸ್ಪರ್ಧೆ!
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಒವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಇ-ಇಥೇಹಾದುಲ್ ಮುಸಲ್ಮಿನ್ (ಎಐಎಂಎಂ) ಪಕ್ಷ ಕೂಡ ಕಣಕ್ಕಿಳಿಯಲಿದೆ ಎಂದು ತಿಳಿದುಬಂದಿದೆ.

ಲೋಕಸಭಾ ಟಿಕೆಟ್ ನೀಡುವುದಾಗಿ ಪ್ರಜ್ವಲ್ ರೇವಣ್ಣ ಸಂತೈಸಿದ ಎಚ್ ಡಿ ದೇವೇಗೌಡ?
ಪಕ್ಷದ ವಿರುದ್ಧ ಬಹಿರಂಗವಾಗಿಯೇ ಮಾತನಾಡುವ ಮೂಲಕ ಆಂತರಿಕ ಬಂಡಾಯದ ಆತಂಕಕ್ಕೆ ಕಾರಣವಾಗಿದ್ದ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಲೋಕಸಭಾ ಸ್ಥಾನ ನೀಡುವುದಾಗಿ ಹೇಳಿ ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಸಂತೈಸಿದ್ದಾರೆ ಎನ್ನಲಾಗಿದೆ.

ರೇವಣ್ಣ ಪುತ್ರ ಪ್ರಜ್ವಲ್ ಗೆ ಅಂತೂ ಮಣೆ; ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅಧಿೃಕೃತವಾಗಿ ಅವಕಾಶ ನೀಡಲಾಗಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ನಾಯಕರು ಸಂಸ್ಕಾರವನ್ನೇ ಮರೆತಿದ್ದಾರೆ: ಶಾಸಕ ಕೃಷ್ಣ ಬೈರೇಗೌಡ ತಿರುಗೇಟು
ಬಿಜೆಪಿ ನಾಯಕರು ಸಂಸ್ಕಾರವನ್ನೇ ಮರೆತು ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ ಶನಿವಾರ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಭ್ರಷ್ಟ, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಅತ್ಯಾಚಾರ ಆರೋಪವಿದೆ: ಬಿಎಸ್ ಯಡಿಯೂರಪ್ಪ
ದುಬಾರಿ ಹುಬ್ಲೋಟ್ ವಾಚ್ ಪ್ರಕರಣದ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟ ಎಂಬ ವಿಚಾರ ಸಾಬೀತಾಗಿದ್ದು, ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ವಿರುದ್ಧ ಅತ್ಯಾಚಾರ ಆರೋಪವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

