Karnataka Polls 2023

40 ಪರ್ಸೆಂಟ್ ಕಮಿಷನ್ನಲ್ಲಿ ಯಾವ ಇಂಜಿನ್ ಎಷ್ಟು ಪಡೆದುಕೊಂಡಿದೆ; ಕರ್ನಾಟಕದ ಜನರಿಗೆ ತಿಳಿಸಿ: ಮೋದಿಗೆ ರಾಹುಲ್ ಆಗ್ರಹ
ಕರ್ನಾಟಕದಲ್ಲಿ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ಡಬಲ್ ಇಂಜಿನ್ ಸರ್ಕಾರದ' ಪ್ರತಿ ಇಂಜಿನ್ಗೆ ರಾಜ್ಯದ 'ಶೇ 40ರಷ್ಟು ಕಮಿಷನ್' ನಿಂದ ಎಷ್ಟು ಸಿಕ್ಕಿದೆ ಎಂದು ಹೇಳಿ ಎಂದು ಕೇಳಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರಿಂದ ಸೋಲಿನ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ ನೀಡಿದ್ದಾರೆ.

ಸಿದ್ದು ಬೇಡ: ನನ್ನನ್ನು ಸಿಎಂ ಮಾಡಿ, ಇಲ್ಲದಿದ್ದರೆ ನೀವೇ ಸಿಎಂ ಆಗಿ: ಖರ್ಗೆಗೆ ಡಿಕೆಶಿ ಪಟ್ಟು
ಸಿಎಂ ಹುದ್ದೆ ಆಯ್ಕೆ ಕಗ್ಗಂಟು ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಾಂಗ್ರೆಸ್ ನ ಅಗ್ರ ನಾಯಕರ ಮನವೊಲಿಕೆಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಗ್ಗುತ್ತಿಲ್ಲ. ಸಿದ್ದರಾಮಯ್ಯ ಬೇಡ, ನನ್ನನ್ನು ಸಿಎಂ ಮಾಡಿ ಇಲ್ಲವೇ ನೀವೇ ಸಿಎಂ ಆಗಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ.

ಒಂದು ಡಿಸಿಎಂ ಹುದ್ದೆ, ಐವರು ಮುಸ್ಲಿಂ ಶಾಸಕರನ್ನು ಮಂತ್ರಿ ಮಾಡಬೇಕು: ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶೇಕಡ 88ರಷ್ಟು ಮುಸ್ಲಿಂರು ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಗೆ ಬಹುಮತ ಬಂದಿದ್ದು ನಮ್ಮ ಸಮುದಾಯಕ್ಕೆ ಒಂದು ಡಿಸಿಎಂ ಹುದ್ದೆ ಐವರನ್ನು ಮಂತ್ರಿ ಮಾಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಆಗ್ರಹಿಸಿದ್ದಾರೆ.

ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್ ಗೆ ಬಹುಮತ ಸಿಗುತ್ತಿದ್ದಂತೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ: ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ
ರಾಜ್ಯದ 224 ಕ್ಷೇತ್ರಗಳಲ್ಲಿ ನಿನ್ನೆ ಶಾಂತಯುತವಾಗಿ ಮತದಾನವಾಗಿದೆ. ಇನ್ನು ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ದೃಷ್ಟಿಯಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಸಮೀಕ್ಷೆಗಳಂತೆ 130 ಸೀಟ್ ಗಳೊಂದಿಗೆ ಕಾಂಗ್ರೆಸ್ ಗೆ ಬಹುಮತ: ಸಿದ್ದರಾಮಯ್ಯ
ಚುನಾವಣೋತ್ತರದ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಬಹುಮತ ಸಿಗುವುದು ಬಹುತೇಕ ಪಕ್ಕ. 130 ಸೀಟ್ ಗಳೊಂದಿಗೆ ನಾವು ಸರ್ಕಾರ ರಚಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ: 10 ಗಂಟೆವರೆಗೂ ನಡೆದ ಮತದಾನ ಪ್ರಕ್ರಿಯೆ; ಶೇ. 72ರಷ್ಟು ಮತಚಲಾವಣೆ!
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು ಶೇ 72ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ: ಮಂಗಳೂರಿನಲ್ಲಿ ಕೈ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ
ವಿಧಾನಸಭಾ ಚುನಾವಣೆಯ ಮತದಾನ ಮುಗಿದ್ದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ.

