Karnataka Polls 2023

ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ; ನಾನು ಸ್ಪರ್ಧಿಸಿಯೇ ತೀರುತ್ತೇನೆ ಎಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ನೀಡಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್ ಅವರು ನಾನು ಚುನಾವಣೆಯಲ್ಲಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಹೇಳಿದ್ದಾರೆ.
ಚುನಾವಣಾ ರಾಜಕೀಯದಿಂದ ಈಶ್ವರಪ್ಪ ನಿವೃತ್ತಿ: ಟಿಕೆಟ್ ಬೇಡ ಎಂದು JP ನಡ್ಡಾಗೆ ಪತ್ರ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಕೇಳಿಲ್ಲ.. ಕೊರಟಗೆರೆಯಲ್ಲಿ ಮಾತ್ರ ಸ್ಪರ್ಧಿಸುತ್ತೇನೆ: ಕಾಂಗ್ರೆಸ್ ನಾಯಕ ಡಾ. ಜಿ ಪರಮೇಶ್ವರ ಸ್ಪಷ್ಟನೆ
2 ಕ್ಷೇತ್ರಗಳಲ್ಲಿ ನಾನು ಟಿಕೆಟ್ ಕೇಳಿರುವ ವಿಚಾರ ಸತ್ಯಕ್ಕೆ ದೂರವಾದದ್ದು.. ನಾನು ಎರಡು ಕ್ಷೇತ್ರಗಳ ಟಿಕೆಟ್ ಕೇಳಿಲ್ಲ. ಕೊರಟಗೆರೆ ಕ್ಷೇತ್ರದಲ್ಲಿ ಮಾತ್ರ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ.ಜಿ ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ.

ಹಾಸನ ರಾಜಕಾರಣ ರೇವಣ್ಣ ಅವರಿಗೇ ಬಿಟ್ಟಿದ್ದೇನೆ: ಎಚ್.ಡಿ. ಕುಮಾರಸ್ವಾಮಿ
ಹಾಸನ ಜೆಡಿಎಸ್ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು, ಹಾಸನ ಜಿಲ್ಲೆಯ ರಾಜಕಾರಣವನ್ನು ರೇವಣ್ಣ ಅವರಿಗೇ ಬಿಟ್ಟಿದ್ದೇನೆ ಎಂದು ಹೇಳಿದ್ದಾರೆ.

