Karnataka polls

ಸ್ವಕ್ಷೇತ್ರದಲ್ಲೇ ಆರ್ ಅಶೋಕ್ ಸೋಲಿಸಲು 'ಅನಕ' ತಂತ್ರ ರೂಪಿಸಿದ ಡಿಕೆ ಬ್ರದರ್ಸ್!
ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಂದಾಯ ಸಚಿವ ಆರ್.ಅಶೋಕ್ ಅವರು ಕಣಕ್ಕಿಳಿದಿದ್ದು, ಸ್ವಕ್ಷೇತ್ರದಲ್ಲಿಯೇ ಅಶೋಕ್ ಅವರನ್ನು ಸೋಲಿಸಲು ಡಿಕೆ.ಬ್ರದರ್ಸ್ ತಂತ್ರ ರೂಪಿಸಿದ್ದಾರೆ.

ಬಿಜೆಪಿ ಬುಡಕ್ಕೆ ಬಂಡಾಯದ ಬೆಂಕಿ… ಜೆಡಿಎಸ್ ಗೆ ಕುಟುಂಬ ಕಲಹದ ಉರಿ (ಸುದ್ದಿ ವಿಶ್ಲೇಷಣೆ)
ಚುನಾವಣೆಗೆ ಅಧಿಸೂಚನೆ ಹೊರ ಬಿದ್ದು ನಾಮ ಪತ್ರ ಸಲ್ಲಿಕೆ ಆರಂಭವಾಗಿರುವ ಈ ಹೊತ್ತಿನಲ್ಲಿ ಆಡಳಿತ ಪಕ್ಷ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿದೆ. ಇದು ಸದ್ಯಕ್ಕೆ ತಣ್ಣಗಾಗುವ ಸಾಧ್ಯತೆಗಳಿಲ್ಲ. ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ನಂತರವೂ ಹೆಚ್ಚುತ್ತಲೇ ಇದೆ.

ಕ್ಷೇತ್ರ ಪ್ರಚಾರ ಮತದಾರರ ಮೇಲೆ ಪರಿಣಾಮ ಬೀರುತ್ತದೆ: ಪಕ್ಷಗಳಿಗೆ ಪ್ರಚಾರ ಸಾಮಗ್ರಿ ಒದಗಿಸುವ ವ್ಯಾಪಾರಿಗಳು
ರಾಜಕೀಯ ಪಕ್ಷಗಳಿಗೆ ಬಾವುಟಗಳು, ಕ್ಯಾಪ್, ಬಟ್ಟೆ ಬಂಟಿಂಗ್ಸ್, ಬ್ಯಾನರ್, ಶಾಲು, ಟೀ ಶರ್ಟ್, ಬ್ಯಾಡ್ಜ್, ಹೆಡ್ ಮತ್ತು ಹ್ಯಾಂಡ್ ಬ್ಯಾಂಡ್, ಟವೆಲ್ ಮತ್ತಿತರ ಚುನಾವಣಾ ಸಾಮಗ್ರಿಗಳನ್ನು ಪೂರೈಸುವ ಸಗಟು ವ್ಯಾಪಾರಿಗಳು, ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿರುವುದರಿಂದ ಮತ್ತು ಪ್ರಚಾರಗಳನ್ನು ಆರಂಭಿಸುತ್ತಿರುವುದರಿಂದ ಬಿರುಸಿನ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ.

ಎದೆಗೆ ಚೂರಿ ಇರಿದಂತಾಗಿದೆ, ಆಕೆ ಹೀಗೆ ಮಾಡಬಾರದಿತ್ತು: ಬಿಜೆಪಿ ಸೇರಿದ ಮಗಳ ನಡೆಗೆ ಕಾಗೋಡು ತಿಮ್ಮಪ್ಪ ಆಕ್ರೋಶ!
ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ. ಆಕೆ ಈ ಕೆಲಸ ಮಾಡಬಾರದಿತ್ತು ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಬಿಎಸ್ ವೈ ಭೇಟಿ; ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ಬಿಜೆಪಿ ಸೇರ್ಪಡೆ!
ಬಿಜೆಪಿ ನಾಯಕರ ಅಸಮಾಧಾನದ ನಡುವೆಯೇ ಇದೀಗ ಕಾಂಗ್ರೆಸ್ ಗೆ ಮತ್ತೊಂದು ಆಘಾತ ಎದುರಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಟಿಕೆಟ್ ಬಂಡಾಯ: ಲಕ್ಷ್ಮಣ್ ಸವದಿ ಬೆನ್ನಲ್ಲೇ ಪಕ್ಷಕ್ಕೆ ಗುಡ್ ಬೈ ಹೇಳಲು ಮತ್ತೋರ್ವ ನಾಯಕ ಮುಂದು
ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪುತ್ತಿದ್ದಂತೆ ಹಲವು ಹಿರಿಯ ನಾಯಕರು ಪಕ್ಷ ತೊರೆಯಲು ನಿರ್ಧರಿಸಿದ್ದು, ಈ ಪಟ್ಟಿಗೆ ಇದೀಗ ಮತ್ತೋರ್ವ ನಾಯಕ ಕೂಡ ಸೇರ್ಪಡೆಯಾಗಿದ್ದಾರೆ.

KS ಈಶ್ವರಪ್ಪ ನಿವೃತ್ತಿ ವಿರೋಧಿಸಿ, ಶಿವಮೊಗ್ಗ ಪಾಲಿಕೆ ಸದಸ್ಯರಿಂದ ಸಾಮೂಹಿಕ ರಾಜೀನಾಮೆ
ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಕೀಯ ನಿವೃತ್ತಿ ವಿರೋಧಿಸಿ ಶಿವಮೊಗ್ಗ ಪಾಲಿಕೆ ಸದಸ್ಯರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.

ಕರ್ನಾಟಕ ಚುನಾವಣಾ ಕದನ: ರಾಜ್ಯದಲ್ಲಿ 20 ರ‍್ಯಾಲಿಗಳಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ!
ಕರ್ನಾಟಕ ಚುನಾವಣೆಗೆ ದಿನಾಂಕ ಘೋಷಣೆ ಬಳಿಕ ರಾಜಕೀಯ ಪಕ್ಷಗಳು ಚುನಾವಣೆ ರ್ಯಾಲಿಗಳನ್ನು ನಡೆಸಿ ಮತದಾರರನ್ನು ಸೆಳೆಯಲು ಮುಂದಾಗುತ್ತಿವೆ. ಇದೇ ವೇಳೆ ಬಿಜೆಪಿ ಸಹ ತಮ್ಮ ಪಕ್ಷದ ಸ್ಟಾರ್ ಐಕಾನ್ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಮುಂದಾಗಿದೆ.

ಅರಕಲಗೂಡು ಜೆಡಿಎಸ್ ಮಾಜಿ ಶಾಸಕ ಎಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ
ನಿನ್ನೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಶನಿವಾರ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

