ರಾಜ್ಯಮಳೆ ಹಾನಿ: ಮೂಲಸೌಕರ್ಯ ಪರಿಹಾರ ಕಾರ್ಯಗಳಿಗೆ 500 ಕೋಟಿ ರೂ. ಬಿಡುಗಡೆ- ಮುಖ್ಯಮಂತ್ರಿ ಬೊಮ್ಮಾಯಿ
ಜುಲೈ ತಿಂಗಳಲ್ಲಿ ಕರಾವಳಿ, ಮಲೆನಾಡು, ಕೊಡಗು, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜೀವಹಾನಿ, ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಈ ನಿಟ್ಟಿನಲ್ಲಿ ಪರಿಹಾರ, ಪುನರ್ವಸತಿ ಕಾರ್ಯಗಳಿಗೆ 500 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.