ರಾಜ್ಯಅನ್ ಲಾಕ್ ಎಂದು ಮೈಮರೆಯಬೇಡಿ, ಪ್ರತಿಯೊಬ್ಬರೂ ಕೊರೋನಾ ಲಸಿಕೆ ಹಾಕಿಸಿಕೊಳ್ಳಿ: ಸಿಎಂ ಯಡಿಯೂರಪ್ಪ ಮನವಿ
ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ ಸಡಿಲಿಸಲಾಗುತ್ತಿದೆ. ಸಾಮಾನ್ಯ ಜನಜೀವನಕ್ಕೆ ಅನುಕೂಲ ಕಲ್ಪಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆಯಷ್ಟೇ ಹೊರತು ಜನರು ನಿರ್ಲಕ್ಷ್ಯ ವಹಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.