Karnataka vs Tamil Nadu

ಕಾವೇರಿ ಕಿಚ್ಚು: KRSಗೆ ಬಿಜೆಪಿ ಮುತ್ತಿಗೆ ಯತ್ನ, ವಿಜಯೇಂದ್ರ, ಆರ್. ಅಶೋಕ್ ಸೇರಿ ಹಲವು ನಾಯಕರು ವಶಕ್ಕೆ! Video
ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಕಾವೇರಿ ಜಲ ನಿಯಂತ್ರಣ ಸಮಿತಿ ಶಿಫಾರಸನ್ನು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿರುವುದನ್ನು ತೀವ್ರವಾಗಿ ಖಂಡಿಸಿದರು.

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ತಿರಸ್ಕಾರ: 'ಸುಪ್ರೀಂ' ತೀರ್ಪು ಸ್ವಾಗತಿಸಿದ ಡಿ.ಕೆ ಶಿವಕುಮಾರ್
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ಮೂವರು ಸದಸ್ಯರ ಪೀಠ ತಿರಸ್ಕರಿಸಿದೆ

ಕಾವೇರಿ ವಿಚಾರವಾಗಿ ಮೇಲ್ಮನವಿ; ಬಿಜೆಪಿ ತನ್ನ ಅವಧಿಯಲ್ಲಿ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?: ಡಿಸಿಎಂ ಡಿಕೆಶಿ
ನೆರೆಯ ತಮಿಳುನಾಡಿಗೆ ನದಿ ನೀರು ಬಿಡುವಂತೆ ರಾಜ್ಯಕ್ಕೆ ಶಿಫಾರಸು ಮಾಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ನಿರ್ದೇಶನದ ವಿರುದ್ಧ ಕರ್ನಾಟಕ ಮತ್ತೊಮ್ಮೆ ಮೇಲ್ಮನವಿ ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ: ಸಿಎಂ ಸಿದ್ದರಾಮಯ್ಯ
ಕಾವೇರಿ ನೀರು ಬಿಡುಗಡೆ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಪ್ರಧಾನಿ ಮಧ್ಯಸ್ಥಿಕೆ ವಹಿಸಿದರೆ ತಮಿಳುನಾಡು ಜತೆ ಮಾತುಕತೆಗೆ ಸಿದ್ಧ: ಸಿಎಂ ಸಿದ್ದರಾಮಯ್ಯ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ತಮಿಳುನಾಡು ಜತೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿವಾದ: ವಿಚಾರಣೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ತಿಕ್ಕಾಟಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಕರ್ನಾಟಕದಲ್ಲಿ ನೀರಿನ ಬಿಕ್ಕಟ್ಟು; ತಳಮಟ್ಟಕ್ಕೆ ಕುಸಿದ ನೀರಿನ ಮಟ್ಟ; ತಮಿಳುನಾಡಿನೊಂದಿಗೆ ಮತ್ತೆ ಸಂಘರ್ಷ ಸಾಧ್ಯತೆ
ರಾಜ್ಯದಲ್ಲಿ ಮಳೆ ಕೊರತೆಯಿಂದ ನೀರಿನ ಕೊರತೆ ಉಂಟಾಗಿದ್ದು, ರಾಜ್ಯದ ಡ್ಯಾಂಗಳಲ್ಲಿ ನೀರಿನ ಮಟ್ಟ ತಳಮಟ್ಟಕ್ಕೆ ಕುಸಿದಿದೆ.

ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ಕರ್ನಾಟಕ ಇಲ್ಲ: ಡಿಕೆ ಶಿವಕುಮಾರ್
ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳಲ್ಲಿ ಸಾಕಷ್ಟು ನೀರಿಲ್ಲದ ಕಾರಣ ಕರ್ನಾಟಕ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಹೇಳಿದ್ದಾರೆ.

