Karnataka

ಈರುಳ್ಳಿ ಬೆಲೆ ಗಗನಕ್ಕೆ: ಗೌರಿ-ಗಣೇಶ ಹಬ್ಬದ ವೇಳೆ ಕೆಜಿಗೆ 100 ರೂ ತಲುಪುವ ಸಾಧ್ಯತೆ
ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಅವು ನಿರೀಕ್ಷಿತ ಪರಿಣಾಮ ಬೀರಿದಂತೆ ಕಾಣುತ್ತಿಲ್ಲ.

ಕಲಬುರಗಿಯ ಇಬ್ಬರು ನೇಪಾಳದಲ್ಲಿ ಸಿಲುಕಿದ್ದಾರೆ; ಇನ್ನೂ ಯಾರಾದರೂ ಇದ್ದಾರೆಯೇ ಎಂಬ ಮಾಹಿತಿ ಕಲೆಹಾಕಲಾಗುತ್ತಿದೆ: ಪ್ರಿಯಾಂಕ್ ಖರ್ಗೆ; Video
ನೇಪಾಳದಲ್ಲಿ ಸಿಲುಕಿರುವ ಕರ್ನಾಟಕದವರ ಕುರಿತು ಹೆಚ್ಚಿನ ನಿಖರ ಮಾಹಿತಿ ಪಡೆಯಲು ರಾಜ್ಯ ಸರ್ಕಾರವು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)ೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಅವರು ಹೇಳಿದರು.

ನೇಪಾಳ ಪ್ರವಾಹ: ಸಂಕಷ್ಟದಲ್ಲಿ ಕನ್ನಡಿಗರು; ರಕ್ಷಣೆಗೆ ರಾಜ್ಯ ಸರ್ಕಾರ ತುರ್ತು ಸಹಾಯವಾಣಿ, Google Form ಬಿಡುಗಡೆ..!
ಕೈಲಾಸ ಮಾನಸ ಸರೋವರ ಯಾತ್ರೆ, ಪ್ರವಾಸ ಅಥವಾ ಇತರ ಕಾರಣಗಳಿಂದ ನೇಪಾಳ ಹಾಗೂ ಟಿಬೆಟ್ ಗಡಿ ಪ್ರದೇಶಗಳಿಗೆ ತೆರಳಿರುವ ಕನ್ನಡಿಗರು ಪ್ರವಾಹದಲ್ಲಿ ಸಿಲುಕಿದ್ದರೆ, ಅವರ ಕುಟುಂಬಸ್ಥರು, ಸಂಬಂಧಿಕರು ಹಾಗೂ ಪ್ರವಾಸ ಆಯೋಜಕರು ತಕ್ಷಣವೇ ಗೂಗಲ್ ಫಾರ್ಮ್ ಮೂಲಕ ಅಗತ್ಯ ಮಾಹಿತಿಯನ್ನು ದಾಖಲಿಸುವಂತೆ ಮನವಿ ಮಾಡಿದೆ.

ರೇಣುಕಾಸ್ವಾಮಿ ಕೇಸ್ನಲ್ಲಿ ಬಿಗ್ ಟ್ವಿಸ್ಟ್: ಉಲ್ಟಾ ಹೊಡೆದ ದರ್ಶನ್ ಆಪ್ತ; D Boss ಹಣೆಬರಹ ನಿರ್ಧರಿಸಲಿದೆಯೇ ಪ್ರದೋಷ್ ಹೇಳಿಕೆ..?
ಈಗಾಗಲೇ ಪೊಲೀಸರು ಸಂಗ್ರಹಿಸಿರುವ ಸಾಂದರ್ಭಿಕ ಸಾಕ್ಷ್ಯಗಳಿಗೆ ಪ್ರದೋಷ್ ಅವರ ಹೇಳಿಕೆ ಪೂರಕವಾಗುವ ಸಾಧ್ಯತೆಯಿದ್ದು, ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ಪ್ರಾಸಿಕ್ಯೂಷನ್ ಪ್ರಕರಣಕ್ಕೆ ಇದು ಮತ್ತಷ್ಟು ಬಲ ನೀಡುವ ಸಾಧ್ಯತೆಗಳಿವೆ.

102 ತಾಲೂಕುಗಳ ವರದಿ ಸರ್ಕಾರದ ಕೈ ಸೇರಿದೆ; ಮುಂದಿನ ಸಂಪುಟ ಸಭೆಯಲ್ಲಿ ಬರ ಘೋಷಣೆ ಬಗ್ಗೆ ನಿರ್ಧಾರ: DCM ಡಾ. ಜಿ.ಪರಮೇಶ್ವರ್
ರಾಜ್ಯದ ಬರ ಪರಿಸ್ಥಿತಿಯನ್ನು ಪ್ರತಿ ವಾರ ಪರಿಶೀಲಿಸಲಾಗುತ್ತಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಲ್ಲ ಮಾನದಂಡಗಳನ್ನು ಆಧರಿಸಿ ಬರ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

ಕಸ್ತೂರಿರಂಗನ್ ವರದಿ: ಕರಡು ಅಧಿಸೂಚನೆ ವಿರುದ್ಧ ನಿರ್ಣಯ ಅಂಗೀಕರಿಸಲು ವಿಶೇಷ ಅಧಿವೇಶನಕ್ಕೆ ರಾಜ್ಯ ಸರ್ಕಾರ ಮುಂದು..!
ಈ ವಿಚಾರವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಅಗತ್ಯವಿದ್ದರೆ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದು ನಿರ್ಣಯ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು.

ಉದ್ಯಾನವನದ ಜಾಗ ಖಾಸಗಿ ಸಂಸ್ಥೆಗಳಿಗೆ ನೀಡಲ್ಲ: ಪ್ರತಿಪಕ್ಷಗಳ ಆರೋಪಕ್ಕೆ ಡಿ.ಕೆ ಶಿವಕುಮಾರ್ ತಿರುಗೇಟು
ಉದ್ಯಾನವನದ ಜಾಗವನ್ನು ಯಾರಿಗೂ ಖಾಸಗಿ ಉದ್ದೇಶಕ್ಕಾಗಿ ಬಳಸಲು ನೀಡುವ ಪ್ರಶ್ನೆಯೇ ಇಲ್ಲ. ಉದ್ಯಾನವನಗಳಲ್ಲಿ ಕಟ್ಟಡ ನಿರ್ಮಾಣಕ್ಕೂ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ.

ವಿದೇಶಿಗರ ಅಕ್ರಮ ವಾಸ್ತವ್ಯಕ್ಕೆ ಸರ್ಕಾರ ಬ್ರೇಕ್: ಡ್ರಗ್ಸ್ ಸೇರಿ ಕ್ರಿಮಿನಲ್ ಕೇಸ್ ಎದುರಿಸುತ್ತಿರುವ 365 ಮಂದಿ ಗಡಿಪಾರಿಗೆ ಸಿದ್ಧತೆ..!
ಕರ್ನಾಟಕದಲ್ಲಿ 365 ವಿದೇಶಿ ಪ್ರಜೆಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇವರ ಪೈಕಿ ಸುಮಾರು 60–70 ಪ್ರತಿಶತ ಮಂದಿ ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ರಾಜ್ಯದಲ್ಲಿ ಬರಗಾಲದ ಬಿಸಿ: ಗಗನಕ್ಕೇರಿದ ಸಕ್ಕರೆ, ಈರುಳ್ಳಿ ಬೆಲೆ..!
ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬಿತ್ತನೆ ಕುಂಠಿತಗೊಂಡಿರುವುದು ಮತ್ತು ನೆರೆ ರಾಜ್ಯ ಮಹಾರಾಷ್ಟ್ರದಲ್ಲೂ ಬೆಳೆ ಹಾನಿಯಾಗಿರುವುದು ಈರುಳ್ಳಿ ಅಭಾವಕ್ಕೆ ಮುಖ್ಯ ಕಾರಣವಾಗಿದೆ.

