Karnataka

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!
ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ, ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಈ ವಿಷಯವನ್ನು ತಿಳಿಸಿದರು. ಇದಕ್ಕಾಗಿ ಎಲ್ಲಾ ಆಡಳಿತಾತ್ಮಕ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಮುಖ ಅನುಷ್ಠಾನ ಸಮಿತಿಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA
ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯದಿಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ಕಾವೇರಿ ನೀರಾವರಿ ನಿಗಮ ಎಂಡಿ ಮಹೇಶ್ ಅವರು ಭಾಗಿಯಾದ್ದಾರೆ.

ವಿಧಾನಸಭೆ, ವಿಧಾನಪರಿಷತ್ನಲ್ಲಿ 7,043 ಕೋಟಿ ರೂ ಪೂರಕ ಬಜೆಟ್ ಅಂದಾಜುಗಳಿಗೆ ಅಂಗೀಕಾರ
ಇದರಲ್ಲಿ 4,324.35 ಕೋಟಿ ರೂಪಾಯಿ ರಾಜಸ್ವ ವೆಚ್ಚಕ್ಕೆ ಹಾಗೂ 2,718.35 ಕೋಟಿ ರೂಪಾಯಿ ಬಂಡವಾಳ ವೆಚ್ಚಕ್ಕೆ ಮೀಸಲಿಡಲಾಗಿದೆ.

ರಾಜ್ಯದಲ್ಲಿ H1N1 ಪ್ರಕರಣಗಳ ಏರಿಕೆ: ಮಳೆಗಾಲದಲ್ಲಿ ಇದು ಸಾಮಾನ್ಯ, ಆತಂಕ ಬೇಡ- ರಾಜ್ಯ ಸರ್ಕಾರ
ಪ್ರಕರಣಗಳು ಮತ್ತಷ್ಟು ಹೆಚ್ಚಾದರೂ ಅಥವಾ ಏಕಾಏಕಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದರೂ ನಿರ್ವಹಿಸಲು ರಾಜ್ಯದ ವೈದ್ಯಕೀಯ ಮೂಲಸೌಕರ್ಯ ಮತ್ತು ಅಗತ್ಯ ಔಷಧಗಳ ದಾಸ್ತಾನು ಸಮರ್ಪಕವಾಗಿದೆ.

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್.ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ನೀಡಿದ್ದ ಹೇಳಿಕೆಗೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆಯ ಮೀಸಲಾತಿ ನಿಗದಿ ವಿಷಯಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ಅವರು ಕೆ.ಎಸ್ ಲತಾಕುಮಾರಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!
ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 141ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

H1N1: ರಾಜ್ಯದಲ್ಲಿ 4,212 ಪ್ರಕರಣ; ಬೆಂಗಳೂರಿನಲ್ಲಿ 3,000ಕ್ಕೂ ಹೆಚ್ಚು; ಸರ್ಕಾರದ ಕ್ರಮ ಏನು?
ಆಗಸ್ಟ್ 22ರವರೆಗೆ ಇಂಟಿಗ್ರೇಟೆಡ್ ಹೆಲ್ತ್ ಇನ್ಫರ್ಮೇಷನ್ ಪ್ಲಾಟ್ಫಾರ್ಮ್ (IHIP) ಮೂಲಕ ವರದಿಯಾದ ಕಣ್ಗಾವಲು ದತ್ತಾಂಶದ ಪ್ರಕಾರ ಈ ಮಾಹಿತಿ ಲಭ್ಯವಾಗಿದೆ. ಕರ್ನಾಟಕದಲ್ಲಿ ಕಳೆದ ಇಡೀ ವರ್ಷದಲ್ಲಿ 4,583 ಹಾಗೂ 2024ರಲ್ಲಿ 3,903 ಪ್ರಯೋಗಾಲಯ ದೃಢೀಕೃತ ಪ್ರಕರಣಗಳು ದಾಖಲಾಗಿದ್ದವು.

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್ 31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ದುರದೃಷ್ಟವಶಾತ್, ಕರ್ನಾಟಕವು ತಮಿಳುನಾಡಿಗೆ ಪ್ರಮಾಣಾನುಗುಣವಾಗಿ ನೀರು ಹರಿಸುತ್ತಿಲ್ಲ. ಅಲ್ಪ ಪ್ರಮಾಣದ ನೀರು ಮಾತ್ರ ಬಿಡುಗಡೆಯಾಗುತ್ತಿದ್ದು, ತಮಿಳುನಾಡಿಗೆ ಬರಬೇಕಾದಷ್ಟು ನೀರು ಸಿಗುತ್ತಿಲ್ಲ.

ಶಿಕ್ಷಣ ಇಲಾಖೆ ಆರ್ಎಸ್ಎಸ್ ಲಾಬಿಯಾಗಿ ಬದಲಾಗಿದೆ: ಮಲ್ಲಿಕಾರ್ಜುನ ಖರ್ಗೆ
ಶಿಕ್ಷಣ ಇಲಾಖೆಯಲ್ಲಿರುವ ಆರ್ಎಸ್ಎಸ್ನೊಂದಿಗೆ ನಂಟು ಹೊಂದಿರುವ ನಾಯಕರು ಯುವ ವಿದ್ಯಾರ್ಥಿಗಳನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಇತ್ತೀಚೆಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಧ್ವನಿಯಲ್ಲೂ ಬದಲಾವಣೆಯಾಗಿದ್ದು, ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕು.

