ರಾಜ್ಯಕೆಎಎಸ್ ಅಧಿಕಾರಿ ಸುಧಾ ನಿವಾಸದಿಂದ 3.7 ಕೆಜಿ ಚಿನ್ನ, 10.5 ಕೆಜಿ ಬೆಳ್ಳಿ ವಶ: ಎಸಿಬಿ ಐಜಿಪಿ ಚಂದ್ರಶೇಖರ್
ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿಗೊಳಗಾಗಿರುವ ಕೆಎಎಸ್ ಅಧಿಕಾರಿ ಡಾ.ಸುಧಾ ಅವರ ನಿವಾಸದಿಂದ 3.7 ಕೆಜಿ ಚಿನ್ನ ಹಾಗೂ 10.5 ಕೆಜಿ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸಿಬಿ ಐಜಿಪಿ ಚಂದ್ರಶೇಖರ್ ಹೇಳಿದ್ದಾರೆ.