ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಸಾವನ್ನಪ್ಪಿದ್ದು, ಆತನ ಸಹೋದರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.