KC General Hospital

ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಜೀವರಕ್ಷಕ ಔಷಧ-ಸಿಬ್ಬಂದಿ ಕೊರತೆ: ಆರೋಗ್ಯ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್
ರಾಜ್ಯ

ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಜೀವರಕ್ಷಕ ಔಷಧ-ಸಿಬ್ಬಂದಿ ಕೊರತೆ: ಆರೋಗ್ಯ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್

ಜೂನ್ 23 ರಂದು ಖುದ್ದಾಗಿ ಹಾಜರಾಗುವಂತೆ ನಿರ್ದೇಶಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಸಮನ್ಸ್‌ಗೆ ಉತ್ತರಿಸಲು ವಿಫಲವಾದರೆ ವಾರಂಟ್ ಹೊರಡಿಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.

ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ: ಸಮಸ್ಯೆಗಳ ಸರಮಾಲೆ ಅನಾವರಣ; ಅವ್ಯವಸ್ಥೆ ಕಂಡು ಬೆಚ್ಚಿದ ಅಧಿಕಾರಿಗಳು !
ರಾಜ್ಯ

ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ: ಸಮಸ್ಯೆಗಳ ಸರಮಾಲೆ ಅನಾವರಣ; ಅವ್ಯವಸ್ಥೆ ಕಂಡು ಬೆಚ್ಚಿದ ಅಧಿಕಾರಿಗಳು !

ಅವ್ಯವಹಾರದ ಬಗ್ಗೆ ಪದೇ ಪದೇ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಮತ್ತು ಬಿ.ವೀರಪ್ಪ ಅವರು ಶುಕ್ರವಾರ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ದಿಢೀರ್ ತಪಾಸಣೆ ನಡೆಸಿದರು.

48 ಲಕ್ಷ ರೂ. ವಿದ್ಯುತ್ ಬಿಲ್ ಬಾಕಿ: ಪವರ್ ಕಟ್ ಮಾಡುವುದಾಗಿ ಕೆಸಿ ಜನರಲ್ ಆಸ್ಪತ್ರೆಗೆ ನೋಟಿಸ್ ನೀಡಿದ ಬೆಸ್ಕಾಂ!
ರಾಜ್ಯ

48 ಲಕ್ಷ ರೂ. ವಿದ್ಯುತ್ ಬಿಲ್ ಬಾಕಿ: ಪವರ್ ಕಟ್ ಮಾಡುವುದಾಗಿ ಕೆಸಿ ಜನರಲ್ ಆಸ್ಪತ್ರೆಗೆ ನೋಟಿಸ್ ನೀಡಿದ ಬೆಸ್ಕಾಂ!

ರೂ.48 ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಸ್ವಾಮ್ಯದ ಕೆಸಿ ಜನರಲ್ ಆಸ್ಪತ್ರೆಗೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ನೋಟಿಸ್ ಜಾರಿ ಮಾಡಿದ್ದು, ಬಿಲ್ ಗಳ ತೆರವುಗೊಳಿಸದಿದ್ದರೆ, ಪವರ್ ಕಟ್ ಮಾಡುವುದಾಗಿ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ.

ಚಿಕಿತ್ಸೆ ವೇಳೆ ನಿರ್ಲಕ್ಷ್ಯದ ಆರೋಪ: ಕೋವಿಡ್ ಸೋಂಕಿತನ ಕುಟುಂಬಸ್ಥರು, ಆಸ್ಪತ್ರೆ ಸಿಬ್ಬಂದಿ ನಡುವೆ ಜಟಾಪಟಿ
ರಾಜ್ಯ

ಚಿಕಿತ್ಸೆ ವೇಳೆ ನಿರ್ಲಕ್ಷ್ಯದ ಆರೋಪ: ಕೋವಿಡ್ ಸೋಂಕಿತನ ಕುಟುಂಬಸ್ಥರು, ಆಸ್ಪತ್ರೆ ಸಿಬ್ಬಂದಿ ನಡುವೆ ಜಟಾಪಟಿ

ಚಿಕಿತ್ಸೆ ವೇಳೆ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪದ ಮೇರೆಗೆ ಕೋವಿಡ್ ಸೋಂಕಿತ ವ್ಯಕ್ತಿಯನ್ನು ಬೇರೆ ಆಸ್ಪತ್ರೆಗೆ ರವಾನಿಸಲು ಮುಂದಾಗ ಘಟನೆ ನಗರದ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.

ಬೆಂಗಳೂರು: 18 ರಿಂದ 44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಸ್ಥಗಿತ
ರಾಜ್ಯ

ಬೆಂಗಳೂರು: 18 ರಿಂದ 44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಸ್ಥಗಿತ

ಕೋವಿಡ್ ಲಸಿಕೆಯಲ್ಲಿ ಕೊರತೆ ಎದುರಾದ ಹಿನ್ನೆಲೆಯಲ್ಲಿ ನಗರದ ಕೆಸಿ ಜನರಲ್ ಆಸ್ಪತ್ರೆಯಲ್ಲಿ 18-44 ವರ್ಷ ವಯೋಮಿತಿಯ ನಾಗರೀಕರಿಗೆ ಕೋವಿಡ್ ಲಸಿಕೆ ನೀಡಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಕೊರೋನಾ ಎಫೆಕ್ಟ್: ಕೆಸಿ ಜನರಲ್ ಆಸ್ಪತ್ರೆಯ ಐಸಿಯು ಬೆಡ್ ಗಳ ಸಂಖ್ಯೆ 6 ರಿಂದ 100ಕ್ಕೆ ಏರಿಕೆ
ರಾಜ್ಯ

ಕೊರೋನಾ ಎಫೆಕ್ಟ್: ಕೆಸಿ ಜನರಲ್ ಆಸ್ಪತ್ರೆಯ ಐಸಿಯು ಬೆಡ್ ಗಳ ಸಂಖ್ಯೆ 6 ರಿಂದ 100ಕ್ಕೆ ಏರಿಕೆ

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ನಗರದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 100 ಐಸಿಯು ಹಾಸಿಗೆಗಳಿಗೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.

ಕೆಸಿ ಜನರಲ್ ಆಸ್ಪತ್ರೆಯನ್ನು ಕೊರೋನಾ ಪೀಡಿತರಿಗಷ್ಟೇ ಸೀಮಿತಗೊಳಿಸಿ: ಸರ್ಕಾರಕ್ಕೆ ಸಿಬ್ಬಂದಿಗಳ ಮನವಿ
ರಾಜ್ಯ

ಕೆಸಿ ಜನರಲ್ ಆಸ್ಪತ್ರೆಯನ್ನು ಕೊರೋನಾ ಪೀಡಿತರಿಗಷ್ಟೇ ಸೀಮಿತಗೊಳಿಸಿ: ಸರ್ಕಾರಕ್ಕೆ ಸಿಬ್ಬಂದಿಗಳ ಮನವಿ

ವೈದ್ಯರ ಮೇಲೆ ಹಲ್ಲೆ ನಡೆದ ಘಟನೆ ಬಳಿಕ ಆತಂಕಕ್ಕೊಳಗಾಗಿರುವ ಕೆಸಿ ಜನರಲ್ ಆಸ್ಪತ್ರೆಯ ಸಿಬ್ಬಂದಿಗಳು, ಆಸ್ಪತ್ರೆಯನ್ನು ಕೊರೋನಾ ಪೀಡಿತರಿಗಷ್ಟೇ ಸೀಮಿತಗೊಳಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ!
ರಾಜ್ಯ

ಬೆಂಗಳೂರು ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ!

ಚಿಕಿತ್ಸೆಗೆ ದಾಖಲಾದ ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ರೋಗಿಯ ಸಂಬಂಧಿಕರು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನ ನಡೆಸಿದ ಘಟನೆ ನಗರದ ಮಲ್ಲೇಶ್ವರದ ಕೆಸಿ.ಜನರಲ್ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ.

ವಿಡಿಯೋ: ಕೊವಿಡ್-19 ಸೋಂಕಿತ ಡಿಸ್ಚಾರ್ಜ್, ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ವೈದ್ಯರು
ರಾಜ್ಯ

ವಿಡಿಯೋ: ಕೊವಿಡ್-19 ಸೋಂಕಿತ ಡಿಸ್ಚಾರ್ಜ್, ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ವೈದ್ಯರು

ಇಲ್ಲಿನ ಮಲ್ಲೇಶ್ವರಂನ ಕೆ. ಸಿ. ಜನರಲ್ ಆಸ್ಪತ್ರೆಗೆ ಕೊರೋನಾ ವೈರಸ್‌ ಸೋಂಕಿನಿಂದ ದಾಖಲಾಗಿದ್ದ ವ್ಯಕ್ತಿಯೊಬ್ಬರು ಗುಣಮುಖರಾಗಿ ಮನೆಗೆ ತೆರಳುವ ಮುನ್ನ ಆಸ್ಪತ್ರೆಯ ಸಿಬ್ಬಂದಿ ಚಪ್ಪಾಳೆ ತಟ್ಟಿ ಅವರನ್ನು ಬೀಳ್ಕೊಟ್ಟಿದ್ದಾರೆ.