Kempanna

ಸರ್ಕಾರದ ದೊಡ್ಡ ವ್ಯಕ್ತಿಗಳ ಹೆಸರು ಹೇಳಿಕೊಂಡು ಬಿಬಿಎಂಪಿಯಲ್ಲಿ ಹಣ ವಸೂಲಿ: ಕೆಂಪಣ್ಣ ಆರೋಪ
ಬಿಬಿಎಂಪಿಯ ಮುಖ್ಯ ಇಂಜಿನಿಯರಿಂಗ್ ಛಿಫ್ ಸರ್ಕಾರದ ದೊಡ್ಡ ವ್ಯಕ್ತಿಗಳ ಹೆಸರು ಹೇಳಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ.

ಬಾಕಿ ಬಿಲ್‌ಗಳ ಬಿಡುಗಡೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಗುತ್ತಿಗೆದಾರರ ಸಂಘ
ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಶನಿವಾರ ಭೇಟಿ ಮಾಡಿದರು. ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು 30 ದಿನಗಳಲ್ಲಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಗುತ್ತಿಗೆದಾರರು ಮುಷ್ಕರ ನಡೆಸಲಿದ್ದಾರೆ ಎಂದು ಒತ್ತಾಯಿಸಿದರು.

ಶೇ.20ರಷ್ಟು ಹಣವೂ ಕಾಮಗಾರಿಗಳಿಗೆ ಖರ್ಚಾಗುತ್ತಿಲ್ಲ, ಸಾರ್ವಜನಿಕರು ಜಾಗೃತರಾಗಬೇಕಿದೆ: ಡಿ ಕೆಂಪಣ್ಣ (ಸಂದರ್ಶನ)
ಇಲಾಖೆಗಳಿಗೆ ಮೀಸಲಿಟ್ಟ ಅನುದಾನಕ್ಕಿಂತ ಕಾಮಗಾರಿ ಆದೇಶಗಳೇ ಹೆಚ್ಚಾಗಿವೆ. 2019ರ ನಂತರ ಎಲ್ಲಾ ಇಲಾಖೆಗಳಲ್ಲಿ ಅದರಲ್ಲೂ ನೀರಾವರಿ ಇಲಾಖೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೇಳಿದ್ದಾರೆ.

ಬಿಲ್ ಬಾಕಿ ಬಿಡುಗಡೆ ಮಾಡಿ ಗುತ್ತಿಗೆದಾರರಿಗೂ ಭಾಗ್ಯಗಳನ್ನು ನೀಡಿ: ಸರ್ಕಾರಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆಗ್ರಹ
ರಾಜ್ಯ ಸರ್ಕಾರದ ವಿರುದ್ಧ ಯಾರೂ ಕಮಿಷನ್ ಆರೋಪವನ್ನು ಮಾಡಿಲ್ಲ ಎಂದು ಹೇಳಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು, ಆಗಸ್ಟ್ 31ರೊಳಗೆ ಗುತ್ತಿಗೆದಾರರಿಗೆ ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಶುಕ್ರವಾರ ಆಗ್ರಹಿಸಿದ್ದಾರೆ.

ಹಣ ಬಿಡುಗಡೆಗೆ ಅಧಿಕಾರಿಗಳಿಂದ ಶೇ 10ರಷ್ಟು ಲಂಚಕ್ಕೆ ಬೇಡಿಕೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಆರೋಪ
ಸರ್ಕಾರದಲ್ಲಿ ಈಗಾಗಲೇ ಅನುಷ್ಠಾನಗೊಂಡಿರುವ ಕಾಮಗಾರಿಗಳ ಬಿಲ್‌ಗಳನ್ನು ತೆರವುಗೊಳಿಸಲು ಉತ್ತರ ಕರ್ನಾಟಕ ಭಾಗದ ಮುಖ್ಯ ಎಂಜಿನಿಯರ್‌ಗಳು ಶೇ 10ರಷ್ಟು ಲಂಚ ಕೇಳುತ್ತಿದ್ದಾರೆ. ಈ ಪರಿಸ್ಥಿತಿ ಹೀಗೆಯೇ ಮುಂದವರೆದಿದ್ದೇ ಆದರೆ...

ಗುತ್ತಿಗೆದಾರ ಕೆಂಪಣ್ಣಗೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನೀಡಿದ್ದ ಸಮನ್ಸ್ ರದ್ದುಗೊಳಿಸಿದ ಕೋರ್ಟ್
ತೋಟಗಾರಿಕಾ ಸಚಿವ ಮುನಿರತ್ನ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರಿನ ಮೇರೆಗೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೆಂಪಣ್ಣ ಮತ್ತು ಗುತ್ತಿಗೆದಾರರ ಸಂಘದ ಇತರರಿಗೆ ನೀಡಿದ್ದ ಸಮನ್ಸ್ ಅನ್ನು ಬೆಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ರದ್ದುಗೊಳಿಸಿದೆ.

ಕಮಿಷನ್ ಆರೋಪಕ್ಕೆ ನ್ಯಾಯಾಂಗ ತನಿಖೆ ನಡೆಸಿ, ಇಲ್ಲವೇ ಜನತಾ ನ್ಯಾಯಾಲಯ ಎದುರಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ
‘ಕಮಿಷನ್’ ಬೇಡಿಕೆ ಕುರಿತು ಗುತ್ತಿಗೆದಾರರ ಸಂಘದಿಂದ ಕೇಳಿಬಂದಿರುವ ಹೊಸ ಆರೋಪವನ್ನು ತನಿಖೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸದಿದ್ದರೆ ಜನತಾ ನ್ಯಾಯಾಲಯ ಮುಂದೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಿಮಗೂ ಮೀರಿ ಆಳುತ್ತಿರುವ 'ಅಜ್ಞಾತ ಸಿಎಂ' ಯಾರು? 'ಮನಿ'ರತ್ನ ವಿರುದ್ಧ ಅಬ್ಬರಿಸಿದ್ದ ಪಿಎಂ 'ಮೌನವ್ರತ' ಪಾಲಿಸುತ್ತಿರುವುದೇಕೆ?
ಬಸವರಾಜ ಬೊಮ್ಮಾಯಿ ಅವರೇ ತಾವು ಕೇವಲ ಭ್ರಷ್ಟರ ಹಾಗೂ ಸಂಘಪರಿವಾರದ ಕೈಲಾಡುವ #PuppetCM ಮಾತ್ರವೇ? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.

ನನ್ನ ವಿರುದ್ಧ ಆರೋಪಕ್ಕೆ ಸಾಕ್ಷಿ, ದಾಖಲೆ ಕೊಡಬೇಕು, ಇಲ್ಲದಿದ್ದರೆ ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವೆ: ಸಚಿವ ಮುನಿರತ್ನ
ತಮ್ಮ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಗರಂ ಆಗಿದ್ದಾರೆ.

