Kempegowda statue

ಮೈಸೂರಿನಲ್ಲಿ ರಾತ್ರೋರಾತ್ರಿ ತಲೆ ಎತ್ತಿದ ಕೆಂಪೇಗೌಡರ ಪ್ರತಿಮೆ: ತೆರವಿಗೆ ಪೊಲೀಸರ ಸೂಚನೆ, ವಿವಾದ ಸೃಷ್ಟಿ
ಆಲನಹಳ್ಳಿ ಒಕ್ಕಲಿಗ ಯುವಕರ ಸಂಘದ ಸದಸ್ಯರು ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕೆಂಪೇಗೌಡ ವೃತ್ತದಲ್ಲಿ 10 ಅಡಿಗಿಂತ ಹೆಚ್ಚು ಎತ್ತರದ ಕಂಚಿನ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದಾರೆ.

ವಿಧಾನ ಸೌಧ ಮುಂದೆ ಕೆಂಪೇಗೌಡ, ಬಸವೇಶ್ವರ ಪುತ್ಥಳಿಗೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ
ವಿಧಾನ ಸೌಧ ಎದುರು ಕೆಂಪೇಗೌಡ, ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ಇಂದು ಶುಕ್ರವಾರ ಭೂಮಿ ಪೂಜೆ ನೆರವೇರಿಸಲಾಯಿತು. ಸಿಎಂ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಿದ್ದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನಿರ್ಮಲಾನಂದ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ನಂಜಾವಧೂತ ಸ್ವಾಮಿಗಳು ಭಾಗವಹಿಸಿದ್ದರು.

ಸದ್ಯದಲ್ಲಿಯೇ ಕೆಂಪೇಗೌಡ ಪ್ರತಿಮೆ ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಡಾ. ಸಿ ಎನ್ ಅಶ್ವಥ ನಾರಾಯಣ
ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ವೀಕ್ಷಿಸಲು ಆಸಕ್ತಿ ಹೊಂದಿರುವ ಪ್ರವಾಸಿಗರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಹಾಗೂ ಕೆಂಪೇಗೌಡ ಪರಂಪರೆ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದ ಕೆಂಪೇಗೌಡ ಪ್ರತಿಮೆ: ಸಾರ್ವಜನಿಕರಿಗೆ ನಿರ್ಬಂಧ? ರಾಜಕಾರಣಿಗಳಿಗೆ ಮಾತ್ರ ಮುಕ್ತ ಪ್ರವೇಶವೇ?
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರಗತಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ವೀಕೆಂಡ್ ನಲ್ಲಿ ಪ್ರತಿಮೆ ನೋಡಲು ಹೋದ ಸಾವಿರಾರು ಜನರಿಗೆ ನಿರಾಸೆ ಕಾದಿತ್ತು.

ಕೆಂಪೇಗೌಡ ಪ್ರತಿಮೆ ಉದ್ಘಾಟನೆ: ಆಡಳಿತಾರೂಢ ಬಿಜೆಪಿ-ವಿಪಕ್ಷಗಳ ನಡುವೆ ಮುಂದುವರೆದ ಕೆಸರೆರಚಾಟ
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣಗೊಳಿಸಿದ ಒಂದು ದಿನದ ನಂತರ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಗಳು ಮುಂದುವರೆದಿವೆ.

ಭಾರತದಲ್ಲಿ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆ ನಿರ್ಮಿಸುವಲ್ಲಿ ಬೆಂಗಳೂರಿನದ್ದು ಮಹತ್ತರ ಪಾತ್ರ: ಪ್ರಧಾನಿ ಮೋದಿ
ಕರ್ನಾಟಕದಲ್ಲಿ ಈಗ ಕೇವಲ ಐಟಿ ಮಾತ್ರವೇ ಅಲ್ಲ, ಜೈವಿಕ ತಂತ್ರಜ್ಞಾನ, ರಕ್ಷಣಾ ಉತ್ಪಾದನಾ ಘಟಕಗಳಲ್ಲಿ ಹೂಡಿಕೆ ಹೆಚ್ಚುತ್ತಿದೆ. ವೈಮಾನಿಕ ಕ್ಷೇತ್ರದಲ್ಲಿ ಕರ್ನಾಟಕ ದೊಡ್ಡ ಸಾಧನೆ ಮಾಡಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ: ಪ್ರಧಾನಿ ನರೇಂದ್ರ ಮೋದಿ
ಇಂದು ಕರ್ನಾಟಕದ ಇಬ್ಬರು ಮಹನೀಯರ ಜನ್ಮಜಯಂತಿ, ಕನಕದಾಸ ಮತ್ತು ಒನಕೆ ಓಬವ್ವ ಅವರ ಜನ್ಮಜಯಂತಿಯಾಗಿದ್ದು ಈ ಶುಭ ಗಳಿಗೆಯಲ್ಲಿ ವಿಶ್ವದಲ್ಲಿ ಮನ್ನಣೆ ಗಳಿಸಿರುವ ಬೆಂಗಳೂರಿನಲ್ಲಿರುವುದು ನನಗೆ ಅತ್ಯಂತ ಸಂತಸ ತಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ; ಸಕಲ ಸಿದ್ಧತೆ ಪೂರ್ಣ, ಕಾರ್ಯಕ್ರಮ ಪಟ್ಟಿ ಇಂತಿದೆ!
ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣ ಸೇರಿಂದತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಉದ್ಯಾನನಗರಿ ಸಕಲ ರೀತಿಯಲ್ಲೂ ಸಜ್ಜಾಗಿದೆ.

ಕೆಂಪೇಗೌಡರ 108 ಅಡಿ ಎತ್ತರದ 'ಪ್ರಗತಿಯ ಪ್ರತಿಮೆ' ಅನಾವರಣಗೊಳಿಸಿದ ಪ್ರಧಾನಿ ಮೋದಿ
ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅನಾವರಣಗೊಳಿಸಿದ್ದಾರೆ.

