ರಾಜ್ಯಕೇತಗಾನಹಳ್ಳಿ ಬಳಿ ಭೂ ಕಬಳಿಕೆ ಪ್ರಕರಣ: ಅತಿಕ್ರಮಣ ತೆರವು ಕುರಿತು 10 ದಿನದಲ್ಲಿ ವರದಿ ಸಲ್ಲಿಸಿ; ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಈಗ ದಾಖಲೆ ನಾಪತ್ತೆಯಾಗಿವೆ. ಮುಂದೆ ಜಮೀನು ನಾಪತ್ತೆಯಾಗಬಹುದು. ಪ್ರಭಾವಿಗಳು ಒತ್ತುವರಿ ಮಾಡಿರುವುದರಿಂದ ಕೈ ಕಟ್ಟಿ ಕುಳಿತ್ತಿದ್ದೀರಿ. ಅದೇ ಭಿಕ್ಷುಕರು, ಬಡವರು ಐದಾರಡಿ ಒತ್ತುವರಿ ಮಾಡಿದರೆ ಬುಲ್ಡೋಜರ್ ತೆಗೆದುಕೊಂಡು ಹೋಗಿ ತೆರವು ಮಾಡುತ್ತಿದ್ದಿರಿ. ಸರ್ಕಾರಕ್ಕೆ ಧೈರ್ಯವಿದ್ದರೆ ಒತ್ತುವರಿ ತೆರವುಗೊಳಿಸಿ.