KIA

ಹವಾಮಾನ ವೈಪರೀತ್ಯ: ಕೆಐಎಯಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ, ಕೆಲಕಾಲ ಪ್ರಯಾಣಿಕರು ತಬ್ಬಿಬ್ಬು!
ಹವಾಮಾನ ವೈಪರೀತ್ಯದಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ವಿಮಾನ ಹಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೆಲಕಾಲ ಪ್ರಯಾಣಿಕರು ತಬ್ಬಿಬ್ಬಾಗಿದ್ದರು.

ಬೆಂಗಳೂರು: ಏರ್‌ಪೋರ್ಟ್ ಶಟಲ್ ಬಸ್ ಬರಲು ವಿಳಂಬ, ತಾಸುಗಟ್ಟಲೆ ಆಕಾಶ ಏರ್ ವಿಮಾನದಲ್ಲೇ ಕುಳಿತ ಪ್ರಯಾಣಿಕರು!
ಮುಂಬೈನಿಂದ ಬೆಂಗಳೂರಿಗೆ ಬಂದ ಆಕಾಶ ಏರ್ ವಿಮಾನ ಬುಧವಾರ ರಾತ್ರಿ ವಿಮಾನ ನಿಲ್ದಾಣ ತಲುಪಿದ ನಂತರ 40 ನಿಮಿಷಗಳಾದರೂ ಶಟಲ್ ಬಸ್ ಟರ್ಮಿನಲ್ ಗೆ ಬಾರದ ಕಾರಣ ವಿಮಾನದಲ್ಲಿದ್ದ ಪ್ರಯಾಣಿಕರು, ತಾಸುಗಟ್ಟಲೇ ತಮ್ಮ ವಿಮಾನದೊಳಗೆ ಇರಬೇಕಾಯಿತು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 97.5ರಷ್ಟು ಏರಿಕೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಹಿಂದಿನ ಹಣಕಾಸು ವರ್ಷದ ಅವಧಿಗೆ ಹೋಲಿಸಿದರೆ ಏಪ್ರಿಲ್‌ನಿಂದ ಡಿಸೆಂಬರ್ 2022 ರವರೆಗೆ ಪ್ರಯಾಣಿಕರ ದಟ್ಟಣೆಯಲ್ಲಿ ಶೇಕಡಾ 97.5 ರಷ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಿಳಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18 ವಿದೇಶಿ ಪ್ರಾಣಿಗಳು ವಶ: ಮೂವರ ಬಂಧನ
ಬ್ಯಾಂಕಾಕ್'ನಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರ ಮೇಲೆ ದಾಳಿ ನಡೆಸಿ ಬಂಧಿಸಿರುವ ವಾಣಿಜ್ಯ ತೆರಿಗೆ ಗುಪ್ತಚರ ಇಲಾಖೆ ಅಧಿಕಾರಿಗಳು, ಅವರಿಂದ 18 ವಿದೇಶಿ ಪ್ರಾಣಿಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಯಾಣಿಕರ ಸೇವೆಗೆ ಸಿದ್ದವಾದ ಕೆಐಎ ಟರ್ಮಿನಲ್ 2: ಜನವರಿ 15ಕ್ಕೆ ಮೊದಲ ವಿಮಾನ ಕಲಬುರಗಿಗೆ!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗಿರುವ ಟರ್ಮಿನಲ್ 2 ಪ್ರಯಾಣಿಕರ ಸೇವೆಗೆ ಸಿದ್ದವಾಗಿದ್ದು, ಇದರ ಮೊದಲ ವಿಮಾನ ಜನವರಿ 15ಕ್ಕೆ ಕಲಬುರಗಿಗೆ ಹಾರಾಟ ನಡೆಸಲಿದೆ.

ಬೀಪ್ ಸೌಂಡ್ ಬಂದ ಕಾರಣ ಜಾಕೆಟ್ ತೆಗೆಯುವಂತೆ ಹೇಳಲಾಗಿತ್ತು, ಶರ್ಟನ್ನಲ್ಲ: ಸಿಐಎಸ್ಎಫ್ ಸ್ಪಷ್ಟನೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಭದ್ರತಾ ಸಿಬ್ಬಂದಿ ಮಂಗಳವಾರ ರಾತ್ರಿ ತನ್ನ ಶರ್ಟ್ ತೆಗೆಯುವಂತೆ ಹೇಳಿದ್ದರು ಎಂಬ ಯುವತಿಯ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಉನ್ನತ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.

ಜಪಾನ್'ನಿಂದ ಕೆಐಎಗೆ ಬಂದ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ದೃಢ
ಜಪಾನ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ಕ್ಕೆ ಬಂದ 63 ವರ್ಷದ ವ್ಯಕ್ತಿಯೊಬ್ಬರಲ್ಲಿ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದೆ.

ಬೆಂಗಳೂರು: ಕೆಐಎಯಲ್ಲಿ 200 ಸ್ನೈಪರ್ ಉಪಕರಣಗಳ ವಶಪಡಿಸಿಕೊಂಡ ಅಧಿಕಾರಿಗಳು
ಕೆಐಎಯ ಏರ್ ಕಾರ್ಗೋ ಸೆಂಟರ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಸ್ನೈಪರ್ ರೈಫಲ್‌ಗಳಿಗೆ ಜೋಡಿಸಲಾದ ಸುಮಾರು 200 ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕೆಂಪೇಗೌಡ ಏರ್ ಪೋರ್ಟ್ ಗೆ 2024ರ ಡಿಸೆಂಬರ್ ಒಳಗೆ ಮೆಟ್ರೊ ಸಂಪರ್ಕ: ಸಿಎಂ ಬೊಮ್ಮಾಯಿ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೊ ಸಂಪರ್ಕ 2024ರ ವರ್ಷಾಂತ್ಯದೊಳಗೆ ಪೂರ್ಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

