kichcha Sudeep

ಕಿಚ್ಚ ಸುದೀಪ್ ಸೇರ್ಪಡೆ ಬಗ್ಗೆ ಚರ್ಚೆ ನಡೆಯುತ್ತಿದೆ: ಸಿಎಂ ಬಸವರಾಜ ಬೊಮ್ಮಾಯಿ
ಸ್ಯಾಂಡಲ್ ವುಡ್ ನಟ, ಅಭಿಮಾನಿಗಳ ಪಾಲಿನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಯಾಗುತ್ತಾರೆಯೇ, ಇಲ್ಲ ಸ್ಟಾರ್ ಪ್ರಚಾರಕರಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆಯೇ ಎಂಬ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ.

ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಬಿಗ್ ಸಪ್ರೈಸ್: ಒಂದಲ್ಲ, ಎರಡಲ್ಲ, ಮೂರು ಸಿನಿಮಾಗಳನ್ನು ಒಪ್ಪಿಕೊಂಡ ಸುದೀಪ್
ವಿಕ್ರಾಂತ್ ರೋಣ ನಂತರ ಕಿಚ್ಚ ಸುದೀಪ್ ಅವರ 46ನೇ ಚಿತ್ರ ಯಾವುದು, ಯಾಕೆ ನೆಚ್ಚಿನ ನಟ ಅಪ್ ಡೇಟ್ ಕೊಡುತ್ತಿಲ್ಲ ಎಂದು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಅದಕ್ಕೀಗ ಸ್ವತಃ ಅಭಿನಯ ಚಕ್ರವರ್ತಿ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ಸ್ವತಃ ಕಿಚ್ಚ ಸುದೀಪ್ ಉತ್ತರ ನೀಡಿದ್ದಾರೆ.

ಹೊಯ್ಸಳ ಟ್ರೇಲರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್
ನಟ ಧನಂಜಯ್ ಅಭಿನಯದ ಗುರುದೇವ್ ಹೊಯ್ಸಳ ಬಿಡುಗಡೆಯ ಸನಿಹದಲ್ಲಿದ್ದು ಚಿತ್ರತಂಡ ಚಿತ್ರದ ಟ್ರೇಲರ್ ಅನ್ನು ಅದ್ಧೂರಿ ಸಮಾರಂಭದಲ್ಲಿ ಅನಾವರಣಗೊಳಿಸಿದ್ದಾರೆ.

ಚಿತ್ರ ಬಿಡುಗಡೆಗೆ ಮುನ್ನ ತಿರುಪತಿ ತಿಮ್ಮಪ್ಪನ ದರುಶನ ಪಡೆಯಲು ಹೊರಟ 'ಕಬ್ಜ' ತಂಡ
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ನಾಳೆ ತೆರೆಕಾಣುವುದಕ್ಕೆ ಮುನ್ನ ಕಬ್ಜ ಟೀಂ ತಿಮ್ಮಪ್ಪನ ದರ್ಶನಕ್ಕೆ ತಿರುಪತಿಗೆ ಹೊರಟಿದೆ.

ಕಬ್ಜಾದಲ್ಲಿ ನನ್ನ ಅತಿಥಿ ಪಾತ್ರ ಅಚ್ಚರಿಯ ಪ್ಯಾಕೇಜ್ ಆಗಿರುತ್ತದೆ: ನಟ ಶಿವರಾಜ್‌ಕುಮಾರ್
ಕೆಲವು ತಿಂಗಳ ಹಿಂದೆ ಶಿವರಾಜಕುಮಾರ್ ಕಬ್ಜಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸುದ್ದಿಯನ್ನು ಕೇಳಿದ್ದೆವು. ಇಷ್ಟು ದಿನ ಈ ಸುದ್ದಿಯನ್ನು ಮುಚ್ಚಿಟ್ಟ ನಿರ್ದೇಶಕ ಆರ್ ಚಂದ್ರು ಕೊನೆಗೂ ಒಂದೆರಡು ದಿನಗಳ ಹಿಂದೆ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ರಾಜೀವ್ ಅಭಿನಯದ ಉಸಿರೇ ಉಸಿರೆ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸುದೀಪ್
ವಿಕ್ರಾಂತ್ ರೋಣ ಸಿನಿಮಾದ ಬಳಿಕ ಕಿಚ್ಚ ಸುದೀಪ್ ತಮ್ಮ ಮುಂದಿನ ಸಿನಿಮಾದ ಬಗ್ಗೆ ಗುಡ್ ನ್ಯೂಸ್ ನೀಡಿದ್ದು, ಸಿನಿಮಾದಲ್ಲಿ ತಮ್ಮ ಮೆಚ್ಚಿನ ನಟ ಏನಾಗಿ ಕಾಣಿಸಿಕೊಳ್ಳಿಲಿದ್ದಾರೆ ಎನ್ನುವ ಕುತೂಹಲದಲ್ಲಿ ಅಭಿಮಾನಿಗಳಿದ್ದಾರೆ.

ಹಳೆಯ ಚಿಂತನೆಗೆ ವಿನಾಯ್ತಿ ಹೇಳಿ ಹೊಸ ಸ್ನೇಹದ ಭಾಷ್ಯಕ್ಕೆ ಮುನ್ನುಡಿ ಬರೆಯಿರಿ ಎಂದು ಕಿಚ್ಚ-ದಚ್ಚುಗೆ ಸಲಹೆ ನೀಡಿದ ನಟ ಜಗ್ಗೇಶ್
ದರ್ಶನ್ ಮೇಲೆ ಚಪ್ಪಲಿ ಎಸೆದಿರುವ ಘಟನೆ ಖಂಡಿಸಿ ಬೆಂಬಲ ಸೂಚಿಸಿದ ಸ್ಯಾಂಡಲ್‌ವುಡ್‌ನ ಹಲವು ನಟ-ನಟಿಯರಲ್ಲಿ ಹಿರಿಯ ನಟ, ರಾಜಕಾರಣಿ ಜಗ್ಗೇಶ್ ಕೂಡ ಒಬ್ಬರು. ಇನ್ನು ತಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಕಿಚ್ಚ ಸುದೀಪ್ ಸುದೀರ್ಘ ಪತ್ರ ಬರೆದು ಟ್ವೀಟ್ ಮಾಡಿದ್ದರು, ಅದು ಸಾಕಷ್ಟು ವೈರಲ್ ಆಗಿದೆ. ಅದಕ್ಕೆ ದರ್ಶನ್ ಧನ್ಯವಾದ ಹೇಳಿದ್ದೂ ಆಯಿತು.

ಬೆನ್ನಿಗೆ ನಿಂತ ಕಿಚ್ಚನಿಗೆ ಧನ್ಯವಾದ ಹೇಳಿದ ದಚ್ಚು, ಫ್ಯಾನ್ಸ್ ಫುಲ್ ಖುಷ್
ಕಳೆದ ಮೂರು ದಿನಗಳಿಂದ ಇಂಟರ್ನೆಟ್ ಸೆನ್ಸೇಷನ್ ಆಗಿದ್ದಾರೆ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್. ತಮ್ಮ ಮುಂಬರುವ ಕ್ರಾಂತಿ ಚಿತ್ರದ ಹಾಡಿನ ಪ್ರೊಮೋಷನ್ ಗೆ ಬಳ್ಳಾರಿಯ ಹೊಸಪೇಟೆಗೆ ಹೋಗಿದ್ದ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆ ನಡೆದಿತ್ತು.

ದರ್ಶನ್ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ, ಅವರ ಮೇಲೆ ಚಪ್ಪಲಿ ಎಸೆದ ಘಟನೆ ನನ್ನ ಮನಸ್ಸಿಗೆ ಘಾಸಿ ಮಾಡಿದೆ: ಕಿಚ್ಚ ಸುದೀಪ್
ಮೊನ್ನೆ ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಾಂತಿ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ತುಂಬಿದ ಜನಜಂಗುಳಿ ಮಧ್ಯೆ ನಾಯಕ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಇಡೀ ಕನ್ನಡ ಚಿತ್ರರಂಗದವರನ್ನು ಘಾಸಿಗೊಳಿಸಿದೆ, ಬಹುತೇಕ ಕಲಾವಿದರು ಈ ಘಟನೆಯನ್ನು ಖಂಡಿಸಿ ದರ್ಶನ್ ಪರ ನಿಂತಿದ್ದಾರೆ.

