kidnap

ಹೊಸ ಮನೆ ಕಟ್ಟುವ ಆಸೆ: 23 ಲಕ್ಷ ರೂ. ಹಣಕ್ಕಾಗಿ ವಿದ್ಯಾರ್ಥಿ ಅಪಹರಿಸಿ ಕೊಲೆ!
ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಉದ್ಯಮಿ ಅಪಹರಿಸಿ ಸುಲಿಗೆ: ಯುಪಿಎಸ್'ಸಿ ಆಕಾಂಕ್ಷಿ ಸೇರಿ ಇಬ್ಬರ ಬಂಧನ
ಉದ್ಯಮಿಯೊಬ್ಬರನ್ನು ಅಪಹರಿಸಿ, ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎಸ್'ಸಿ ಆಕಾಂಕ್ಷಿ ಸೇರಿ ಇಬ್ಬರು ಆರೋಪಿಗಳನ್ನು ರಾಜಾಜಿನಗರ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಗೋವಾದಲ್ಲಿ ಹೊಸವರ್ಷಾಚರಣೆಗೆ ವ್ಯಕ್ತಿಯ ಅಪಹರಣ, ಕೊಲೆ: ಮೂವರು ಆರೋಪಿಗಳ ಬಂಧನ
ಗೋವಾದಲ್ಲಿ ಹೊಸ ವರ್ಷ ಆಚರಿಸಲು ವ್ಯಕ್ತಿಯನ್ನು ಅಹಹರಿಸಿ, ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಮಣಿಪುರ: ತಾಯಿ ಮತ್ತು ಪತ್ನಿಗೆ ಬಂದೂಕು ತೋರಿಸಿ ಗಾಯಕನನ್ನು ಅಪಹರಿಸಿದ ದುಷ್ಕರ್ಮಿಗಳು!
ಮಣಿಪುರದ ಗಾಯಕ ಮತ್ತು ಸಾಹಿತಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ. ಮಾಹಿತಿಯ ಪ್ರಕಾರ, ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗಾಯಕನ ಹೆಂಡತಿ ಮತ್ತು ತಾಯಿಗೆ ಬಂದೂಕು ತೋರಿಸಿ ನಂತರ ಗಾಯಕನನ್ನು ಅಪಹರಿಸಿ ತಮ್ಮೊಂದಿಗೆ ಕರೆದೊಯ್ದಿದ್ದಾರೆ.

ಅಪ್ರಾಪ್ತ ಅಕ್ಕ-ತಮ್ಮನನ್ನು ಅಪಹರಿಸಿ, ತಮ್ಮ ಊರಿಗೆ ಕರೆದೊಯ್ಯಲು ಯತ್ನಿಸಿದ ಬಿಹಾರದ ದಂಪತಿ ಬಂಧನ
ಬೆಂಗಳೂರು ನಗರದಲ್ಲಿ ಇಬ್ಬರು ಅಪ್ರಾಪ್ತ ಅಕ್ಕ-ತಮ್ಮನನ್ನು ಅಪಹರಿಸಿದ ಆರೋಪದ ಮೇಲೆ ಬಿಹಾರದ ದಂಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರು ವರ್ಷದ ಬಾಲಕಿ ಮತ್ತು ಆಕೆಯ ಎಂಟು ತಿಂಗಳ ಸಹೋದರನನ್ನು ರಕ್ಷಿಸಿ, ಅವರ ಪೋಷಕರಿಗೆ ಒಪ್ಪಿಸಲಾಗಿದೆ ಎಂದು ಅವರು ಹೇಳಿದರು.

ಹಾಸನ: ಬೆಳ್ಳಂಬೆಳಗ್ಗೆ ಸಿನಿಮೀಯ ರೀತಿ ಕಿಡ್ನಾಪ್; ಮದುವೆಗೆ ಒಪ್ಪದ ಶಾಲಾ ಶಿಕ್ಷಕಿ ಅಪಹರಣ!
ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ದುರುಳರು ಶಾಲಾ ಶಿಕ್ಷಕಿಯನ್ನೇ ಅಪಹರಿಸಿರುವ ಘಟನೆ ಹಾಸನ ಜಿಲ್ಲೆಯ ಬಿಟ್ಟಗೌಡನಹಳ್ಳಿಯ ಬಳಿ ಇಂದು ಬೆಳಗ್ಗೆ ನಡೆದಿದೆ.

ಕಲಬುರಗಿ: ಸ್ನೇಹಿತನ ಅಪ್ರಾಪ್ತ ಮಗಳನ್ನು ಅಪಹರಿಸಿ ಅತ್ಯಾಚಾರ, ವ್ಯಕ್ತಿಗೆ 20 ವರ್ಷಗಳ ಜೈಲು ಶಿಕ್ಷೆ
2021ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೊಕ್ಸೊ ನ್ಯಾಯಾಲಯ) 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶಾಂತವೀರ್ ಬಿ ತುಪ್ಪದ್ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಆಘಾತಕಾರಿ ಘಟನೆ; ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ
ಬಳ್ಳಾರಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸಂತ್ರಸ್ತೆ- ಬಿಕಾಂ ವಿದ್ಯಾರ್ಥಿನಿ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ಬೆಂಗಳೂರು: ಮನೆಗಳ್ಳತನ, ಅಪಹರಣ: ಐವರು ಡಕಾಯಿತರ ಬಂಧನ
ಐವರು ಡಕಾಯಿತರ ತಂಡವೊಂದು ಗಾರ್ವೆಭಾವಿಪಾಳ್ಯ ಬಳಿಯ ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆ ಸೇರಿದಂತೆ ಮೂವರನ್ನು ದರೋಡೆ ಮಾಡಿರುವ ಘಟನೆ ನಡೆದಿದೆ. ಸೋಮವಾರ ಮಧ್ಯಾಹ್ನ 3.30 ರಿಂದ 4 ಗಂಟೆಯ ನಡುವೆ ಈ ಘಟನೆ ನಡೆದಿದೆ.

