ರಾಜ್ಯರುದ್ರಗೌಡ ಪಾಟೀಲ್ ಮಹಾರಾಷ್ಟ್ರದಲ್ಲಿ ಇರುವ ಬಗ್ಗೆ ಮಾಹಿತಿ ಇದೆ, ಅಗತ್ಯಬಿದ್ದರೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಡಾ ಪರಮೇಶ್ವರ್
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಯತ್ನಿಸಿದ ಪ್ರಕರಣದ ಕಿಂಗ್ಪಿನ್ ರುದ್ರಗೌಡ ಪಾಟೀಲ್ ನಗರದ ವಸತಿ ಸಮುಚ್ಚಯದಿಂದ ಪರಾರಿಯಾಗಿರುವ ಘಟನೆ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಪೊಲೀಸರ ಕಾರ್ಯವೈಖರಿ ಬಗ್ಗೆ ಸಂಶಯ ಮೂಡುವಂತೆ ಮಾಡಿದೆ.