ರಾಜಕೀಯಅಮುಲ್, ನಂದಿನಿ ವಿಲೀನ: ಶಾ ವಿರುದ್ಧ ಎಚ್ ಡಿಕೆ, ಡಿಕೆಶಿ ವಾಗ್ದಾಳಿ
ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.