ರಾಜಕೀಯKMVSTDC ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರಹ್ಲಾದ್ ಜೋಶಿ ಒತ್ತಾಯ
ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಪಿ (52) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.