Kodagu

ಕೊಡಗು: ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿಕೆ, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ
ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಅನೇಕ ಅವಾಂತರಗಳಿಗೆ ಕಾರಣವಾಗಿದೆ. ಈ ವರ್ಷ ಜೂನ್ನಿಂದ ಜಿಲ್ಲೆಯಲ್ಲಿ ಸುಮಾರು 40 ಇಂಚುಗಳಷ್ಟು ಮಳೆ ದಾಖಲಾಗಿದ್ದರೂ ಜಿಲ್ಲೆಯ ಹಲವು ಹೋಬಳಿಗಳಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 500 ರಷ್ಟು ಅಧಿಕ ಮಳೆಯಾಗಿದೆ.

ಅವ್ಯಾಹತ ಮಳೆ: ಕರಾವಳಿ, ಕೊಡಗು, ಉತ್ತರ ಕನ್ನಡ ಭಾಗಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ
ಕರಾವಳಿ, ಕೊಡಗು, ಮಲೆನಾಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಲ್ಲಿನ ಪರಿಸ್ಥಿತಿ ನೋಡಿಕೊಂಡು ಮುಂಜಾಗ್ರತೆ ಕ್ರಮವಾಗಿ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಮುಂದುವರಿದ ಮಳೆ: ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸೋಮವಾರ ಕೂಡ ಭಾರೀ ಮಳೆ ಮುಂದುವರಿದಿದೆ. ಬೆಳ್ತಂಗಡಿ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸೂಚನೆ ಮೇರೆಗೆ ತಹಶಿಲ್ದಾರ್ ರಜೆ ನೀಡಿದ್ದಾರೆ.

ಕಾಫಿನಾಡು ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ, ದಕ್ಷಿಣ ಕನ್ನಡ ಗಡಿಭಾಗದಲ್ಲೂ ಮುಂದುವರಿದ ವರ್ಷಧಾರೆ
ಕೊಡಗು ಮತ್ತು ದಕ್ಷಿಣ ಕನ್ನಡ ಗಡಿಭಾಗ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ಭಾನುವಾರ ಕೂಡ ಸತತ ಮಳೆಯಾಗುತ್ತಿದೆ. ಆಷಾಢ ಮಳೆ ಕಾಫಿನಾಡು ಕೊಡಗಿನಲ್ಲಿ ಸತತವಾಗಿ ಸುರಿಯುತ್ತಿದ್ದು, ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪ್ರವಾಹದ ಭೀತಿ ಎದುರಾಗಿದೆ.

ಕೊಡಗಿನಲ್ಲಿ ಸತತ ಕಂಪನಗಳು ಸನ್ನಿಹಿತವಾಗುತ್ತಿರುವ ವಿಪತ್ತಿನ ಸಂಕೇತವಾಗಿರಬಹುದು: ಭೂಕಂಪಶಾಸ್ತ್ರಜ್ಞರು
ಕೊಡಗಿನಲ್ಲಿ ಆಗಾಗ ಸಂಭವಿಸುತ್ತಿರುವ ಭೂಕಂಪಗಳು ಮತ್ತು ಕಂಪನಗಳು ಮುಂಬರುವ ಅನಾಹುತದ ಸಂಕೇತವಾಗಿರಬಹುದು ಎಂದು ಭೂಕಂಪಶಾಸ್ತ್ರಜ್ಞರು ಮತ್ತು ತಜ್ಞರು ಎಚ್ಚರಿಸಿದ್ದಾರೆ.

ಕೊಡಗಿನಲ್ಲಿ ಇಂದು ಮತ್ತೆ ಭೂಕಂಪನ; ವಾರದ ಅವಧಿಯಲ್ಲಿ ನಾಲ್ಕನೇ ಕಂಪನ
ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಭೂಕಂಪನ ಸಂಭವಿಸಿದ್ದು, ವಾರದ ಅವಧಿಯಲ್ಲಿ ಇದು ನಾಲ್ಕನೇ ಕಂಪನವಾಗಿದೆ.

ಸುಳ್ಯ, ಕೊಡಗಿನ ಕೆಲವೆಡೆ ಭೂಕಂಪನದ ಅನುಭವ
ದಕ್ಷಿಣ ಕನ್ನಡದ ಸುಳ್ಯ ತಾಲೂಕು, ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದ್ದು, ಸ್ಥಳೀಯರು ಆತಂಕಗೊಡಿದ್ದಾರೆ.

ಹಾಸನ, ಕೊಡಗು, ಮಂಡ್ಯ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕಂಪಿಸಿದ ಭೂಮಿ: ನಸುಕಿನ ಸವಿನಿದ್ದೆಯಲ್ಲಿದ್ದವರನ್ನು ಬಡಿದೆಪ್ಪಿಸಿದ ಭೂಕಂಪ
ಕಾಫಿನಾಡು ಕೊಡಗು ಜಿಲ್ಲೆಯ ಹಲವೆಡೆ ಮತ್ತು ಬಯಲುಸೀಮೆ ಹಾಸನದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿದ್ದು ಜನತೆಯಲ್ಲಿ ಆತಂಕ ಸೃಷ್ಟಿಸಿತು.

ಕೊಡಗಿನಲ್ಲಿ ರಸಗೊಬ್ಬರಗಳ ತೀವ್ರ ಕೊರತೆ: ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ
ಕೊಡಗಿನಾದ್ಯಂತ ಕೃಷಿ ಚಟುವಟಿಕೆಗಳ ಮೇಲೆ ಗೊಬ್ಬರದ ತೀವ್ರ ಕೊರತೆ ಗಂಭೀರ ಪರಿಣಾಮವನ್ನು ಬೀರಿದ್ದು, ಈ ನಡುವೆ ತಿಂಗಳಾಂತ್ಯದೊಳಗೆ ರೈತರಿಗೆ ಪರಿಹಾರ ದೊರೆಯಲಿದೆ ಎಂದು ಕೃಷಿ ಇಲಾಖೆ ಭರವಸೆ ನೀಡಿದೆ.

