Kodagu

ಮೈಸೂರು ದಸರಾ: ಗಜ ಪಯಣಕ್ಕೆ ಕೊಡಗಿನಿಂದ ಹೊರಟ ಐದು ಆನೆ
ದುಬಾರೆ ಕ್ಯಾಂಪ್‌ನಿಂದ ಒಟ್ಟು ಏಳು ಆನೆಗಳು ಈ ವರ್ಷ ಮೈಸೂರು ದಸರಾ ಉತ್ಸವದಲ್ಲಿ ಭಾಗವಹಿಸಲಿವೆ. ಇಂದು ಕಂಜನ್, ಧನಂಜಯ ಹಾಗೂ ಗೋಪಿ ಸಾಕಾನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು.

ಎಚ್ಚೆತ್ತ ಸರ್ಕಾರ: ಕೊಡಗಿನಲ್ಲಿ 104 ಸಂಭವನೀಯ ಭೂಕುಸಿತ-ಪ್ರವಾಹ ಪ್ರದೇಶಗಳ ಗುರುತು; 2,995 ಕುಟುಂಬಗಳ ಸ್ಥಳಾಂತರಕ್ಕೆ ಸಿದ್ಧತೆ
ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಈ ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ತಿಂಗಳು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಜಿಲ್ಲಾಡಳಿತವು ಸಂಭಾವ್ಯ ಭೂಕುಸಿತದ ಪ್ರದೇಶಗಳಲ್ಲಿ ನೆಲೆಗೊಂಡಿರುವ 2,995 ಕುಟುಂಬಗಳಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ನೋಟಿಸ್ ನೀಡಿದೆ.

ವಯನಾಡ್ ದುರಂತದಲ್ಲಿ ಮಗನನ್ನು ಕಳೆದುಕೊಂಡ ಕೊಡಗಿನ ದಂಪತಿ!
ಕವಿತಾ ಮತ್ತು ರವಿ ಕೊಡಗಿನಲ್ಲಿ ನೆಲೆಸಿರುವ ದಂಪತಿ. ರವಿ ತಮಿಳುನಾಡಿನವರಾಗಿದ್ದರೆ, ಕವಿತಾ ಹುಟ್ಟಿ ಬೆಳೆದದ್ದು ಕೊಡಗಿನಲ್ಲಿ. ದಂಪತಿಗೆ ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಇದ್ದಾರೆ. ರೋಹಿತ್, ಒಂಬತ್ತು ವರ್ಷದ ಅವರ ಕಿರಿಯ ಮಗ. ಕೊಡಗಿನ ಗುಹ್ಯ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದನು.

ಕೊಡಗಿಗೆ ರೆಡ್ ಅಲರ್ಟ್ ಘೋಷಣೆ: ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧ
ಅತಿಯಾದ ಮಳೆಯಿಂದ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳನ್ನು ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ.

ಕೊಡಗು: ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳ ಸಾವು
ತೆರಾಲು ಗ್ರಾಮದ ರೈತ ಬೊಜ್ಜoಗಡ ನಟರಾಜ್ (ನಂದ) ಅವರಿಗೆ ಸೇರಿದ ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.

6 ತಿಂಗಳ ಹಿಂದೆ ಮೃತಪಟ್ಟ ಇಂಜಿನಿಯರ್ ವರ್ಗಾವಣೆ: ನಗರಾಭಿವೃದ್ಧಿ ಇಲಾಖೆ ಎಡವಟ್ಟು
ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್ ಅಶೋಕ ಪುಟಪಾಕ್ ಅವರನ್ನು ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ವಿಧಾನಸಭಾ ಕ್ಷೇತ್ರದಲ್ಲಿ ಈ ಎಡವಟ್ಟು ನಡೆದಿದೆ.

ಕೊಡಗಿನಲ್ಲಿ ಹೃದಯ ಚಿಕಿತ್ಸಾ ಕೇಂದ್ರ ಸ್ಥಾಪನೆ: ಸಚಿವ ಶರಣ್ ಪ್ರಕಾಶ್ ಪಾಟೀಲ್ ಭರವಸೆ
ಕೊಡಗಿನಲ್ಲಿ ಹೃದಯ ತಪಾಸಣೆ ಕೇಂದ್ರ ಸ್ಥಾಪಿಸುವುದಾಗಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ್ ಭರವಸೆ ನೀಡಿದ್ದಾರೆ.

ಕೊಡಗು: ಭೂದಾಖಲೆ-ಸರ್ವೆ ಇಲಾಖೆಯಲ್ಲಿ ಶೇ 50ಕ್ಕೂ ಹೆಚ್ಚು ಸಿಬ್ಬಂದಿ ಕೊರತೆ, ಸಾರ್ವಜನಿಕರಿಗೆ ಸಮಸ್ಯೆ
ಜಿಲ್ಲಾ ಭೂದಾಖಲೆಗಳು ಮತ್ತು ಸರ್ವೆ ಇಲಾಖೆಗೆ ಕ್ಲರ್ಕ್ ಹುದ್ದೆಗಳು ಸೇರಿದಂತೆ ಒಟ್ಟು 101 ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಆದರೆ, ಇಲಾಖೆಯಲ್ಲಿ ಒಟ್ಟು 59 ಹುದ್ದೆಗಳು ಖಾಲಿ ಬಿದ್ದಿದ್ದು, ಇಲಾಖೆ ಕಾರ್ಯವೈಖರಿಗೆ ತೀವ್ರ ಸಮಸ್ಯೆಯಾಗಿದೆ.

ಕೊಡಗು: ಕೆಲಸಕ್ಕೆ ಹೋಗಲು ರೆಡಿಯಾಗುತ್ತಿದ್ದ ಯುವತಿಗೆ ಹೃದಯಾಘಾತ; 24 ವರ್ಷದ ನಿಲಿಕ ಸಾವು!
ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಇವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

