Kolar

ಕೋಲಾರ: ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ, ಸುಪಾರಿ ಕೊಲೆ ಶಂಕೆ
ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಕೋಲಾರದಲ್ಲಿ ದುಷ್ಕರ್ಮಿಗಳು ಸುಪಾರಿ ಪಡೆದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೋಲಾರ: ಮಾಲೂರಿನಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಬರ್ಬರ ಹತ್ಯೆ
ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆ ನಡೆದಿದೆ.

ಕೋಲಾರ: ಕೂಲಿ ಕೇಳಿದ್ದಕ್ಕೆ ದಲಿತ ವ್ಯಕ್ತಿಗೆ ನಿಂದಿಸಿ, ಥಳಿತ; ಇಬ್ಬರನ್ನು ಬಂಧಿಸಿದ ಪೊಲೀಸರು
ಅಕ್ಟೋಬರ್ 17 ರಂದು ಕೋಲಾರದ ಬಂಗಾರಪೇಟೆ ತಾಲೂಕಿನ ದೊಡ್ಡವಲಗಮಡಿಯಲ್ಲಿ ಕೂಲಿಯನ್ನು ಕೇಳಿದ್ದಕ್ಕೆ ದಲಿತ ವ್ಯಕ್ತಿಯೊಬ್ಬನಿಗೆ ಥಳಿಸಿ, ನಿಂದಿಸಿರುವ ಘಟನೆ ನಡೆದಿದೆ. ಸಂತ್ರಸ್ತ 29 ವರ್ಷದ ಕಟ್ಟಡ ಕಾರ್ಮಿಕನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಲಾರ ಪಾಕಿಸ್ತಾನದಲ್ಲಿದೆಯೇ? ನಮ್ಮ ಖಡ್ಗ, ಗದೆ, ತ್ರಿಶೂಲ, ಸುದರ್ಶನ ಚಕ್ರ ಹೊರ ತೆಗೆಯಬೇಕಾಗುತ್ತದೆ: ಸಿ.ಟಿ ರವಿ
ಕೋಲಾರದಲ್ಲಿ ಪ್ರತಿಭಟನೆಗೆ ಬರಬಾದರು ಎಂದು ಹೇಳುತ್ತಾರೆ. ಇದೇನು ಪಾಕಿಸ್ತಾನದಲ್ಲಿದೆಯೇ, ನಾನು ತಾಲಿಬಾಲಿನವನಲ್ಲ, ಬಾಂಬ್ ಹಾಕಿದವನಲ್ಲ. ಕೋಲಾರದ ಜನರು ಉಂಡ ಮನೆಗೆ ಎರಡು ಬಗೆದವರ ಬಗ್ಗೆ ಎಚ್ಚರ ವಹಿಸಬೇಕು .

ಕೋಲಾರ: ಸಾರ್ವಜನಿಕವಾಗಿ ಕತ್ತು ಸೀಳಿಕೊಂಡ ವ್ಯಕ್ತಿ, ಆಸ್ಪತ್ರೆಗೆ ತೆರಳುವಷ್ಟರಲ್ಲಿ ಸಾವು!
ಕೋಲಾರ ಜಿಲ್ಲೆಯಲ್ಲಿ ಬುಧವಾರ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬರು ತಮ್ಮ ಕತ್ತು ಸೀಳಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಬೇತಮಂಗಲ ನಿವಾಸಿ 35 ವರ್ಷದ ರಹಮತ್ ಉಲ್ಲಾ ಬೇಗ್ ಎಂದು ಗುರುತಿಸಲಾಗಿದೆ.

ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಕಿತ್ತಾಟ: ಸಂಸದ ಮುನಿಸ್ವಾಮಿ, ಶಾಸಕ ಎಸ್‌ಎನ್ ನಾರಾಯಣಸ್ವಾಮಿ ವಿರುದ್ಧ ಎಫ್‌ಐಆರ್
ಕೋಲಾರದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ.

ಬೆಳೆ ನಾಶಕ್ಕೆ ಕಾರಣರಾದ ಅರಣ್ಯಾಧಿಕಾರಿಗಳ ಅಮಾನತುಗೊಳಿಸಿ: ಬಿಜೆಪಿ ಆಗ್ರಹ
ಅರಣ್ಯ ಭೂಮಿ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಆರೋಪ ಹಿನ್ನೆಲೆಯಲ್ಲಿ ರೈತರನ್ನು ಜಮೀನುಗಳಿಂದ ಹೊರಗೆ ಹಾಕಿ ಬೆಳೆ ನಾಶಕ್ಕೆ ಕಾರಣರಾದ ಅರಣ್ಯಾಧಿಕಾರಿಗಳ ಅಮಾನತುಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ.

ತಾರಕಕ್ಕೇರಿದ ಬಿಜೆಪಿ ಸಂಸದ-ಕಾಂಗ್ರೆಸ್ ಶಾಸಕರ ಜಟಾಪಟಿ: ವೇದಿಕೆ ಮೇಲೆ ಮುನಿಸ್ವಾಮಿ-ನಾರಾಯಣಸ್ವಾಮಿ ಮಾತಿನ ಚಕಮಕಿ
ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಎಸ್ ಮುನಿಸ್ವಾಮಿ ಹಾಗೂ ಕಾಂಗ್ರೆಸ್ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ನಡುವೆ ವೇದಿಕೆಯ ಮೇಲೆಯೇ ಮಾತಿನ ಚಕಮಕಿ ನಡೆದಿದ್ದು, ಬಹಿರಂಗವಾಗಿಯೇ ಕೈ-ಕೈ ಮಿಲಾಯಿಸಲು ಜನಪ್ರತಿನಿಧಿಗಳು ಮುಂದಾಗಿದ್ದ ಘಟನೆ ನಡೆದಿದೆ.

ಪೊರಕೆಯಿಂದ ಹೊಡೆದು ಮಹಿಳೆಯಿಂದ ಜಾತಿ ನಿಂದನೆ; ನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣು
ಮಹಿಳೆಯೊಬ್ಬರು ಪೊರಕೆಯಿಂದ ಹೊಡೆದು ಜಾತಿನಿಂದನೆ ಮಾಡಿದರು ಎಂಬ ಕಾರಣಕ್ಕೆ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಲೂರು ತಾಲೂಕಿನ ಹುರುಳಗೆರೆ ಗ್ರಾಮದಲ್ಲಿ ನಡೆದಿದೆ.

