ರಾಜ್ಯಚೆನ್ನೈ-ಬೆಂಗಳೂರು ಕಾರಿಡಾರ್ನಲ್ಲಿ ಮೇಲ್ಸೇತುವೆ ನಿರ್ಮಾಣ: ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ
ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ ಕಾರಿಡಾರ್ ಮಾರ್ಗದಲ್ಲಿನ ಹೊಸಕೋಟೆ ತಾಲ್ಲೂಕಿನ ಕೊಳತೂರು ಜಂಕ್ಷನ್ ಬಳಿ ಮೇಲ್ಸೇತುವೆ ನಿರ್ಮಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.