Koppal

ಕೊಪ್ಪಳದಲ್ಲಿ ನೀರು ಕಲುಷಿತಗೊಂಡು ಸಾವು ಸಂಭವಿಸಿಲ್ಲ: ಮರಣೋತ್ತರ ಪರೀಕ್ಷೆ ವರದಿ
ಕೊಪ್ಪಳ ಜಿಲ್ಲೆಯಲ್ಲಿ ಸಂಭವಿಸಿದ್ದ ಮೂವರ ಸಾವು ಕಲುಷಿತ ನೀರಿನಿಂದ ಸಂಭವಿಸಿಲ್ಲ ಎಂಬುದು ಮೃತರ ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ.

ಕೊಪ್ಪಳ: ಬಾಲಕಿಯರನ್ನು ಗುರಿಯಾಗಿಸಿ ಶಾಲೆಯ ಗೋಡೆ ಮೇಲೆ ಅಶ್ಲೀಲ ಬರಹ
ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಶಾಲೆಯೊಂದರ ಗೋಡೆಗಳ ಮೇಲೆ ವಿಶೇಷವಾಗಿ ಮುಸ್ಲಿಂ ಸಮುದಾಯದ ಹುಡುಗಿಯರನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಅಶ್ಲೀಲ ಬರಹ ಬರೆದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೊಪ್ಪಳ: ಸಹಕರಿಸು ಎಂದು ಸ್ಟಾಫ್ ನರ್ಸ್‌ಗೆ ಕಿರುಕುಳ; ವೈದ್ಯನ ವಿರುದ್ಧ ಪ್ರಕರಣ ದಾಖಲು
ಕೊಪ್ಪಳ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಟಾಫ್ ನರ್ಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ; ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ ಚುನಾವಣಾ ಆಯೋಗ
ಗಾಲಿ ಜನಾರ್ದನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ವಾಹನಗಳು ಮತ್ತು ಆಸ್ತಿ ವಿವರಗಳನ್ನು ನೀಡಿಲ್ಲ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಕೊಪ್ಪಳ: ಕಲುಷಿತ ನೀರು ಸೇವನೆಯಿಂದ ಮೂವರು ಸಾವು ಪ್ರಕರಣ; ಇಬ್ಬರು ಪಿಡಿಒಗಳ ಅಮಾನತು
ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವಿಗೀಡಾದ ಮತ್ತು ನೂರಾರು ಜನರು ಅಸ್ವಸ್ಥರಾದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಬಿಜಕಲ್ ಮತ್ತು ಬಸರಿಹಾಳ್ ಗ್ರಾಮಗಳ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಿದೆ.

ಕೊಪ್ಪಳ: ಗಂಟಲಿನಲ್ಲಿ ಆಹಾರ ಸಿಲುಕಿ 14 ವರ್ಷದ ವಿಕಲಚೇತನ ಬಾಲಕ ಸಾವು!
ದುರಂತ ಘಟನೆಯೊಂದರಲ್ಲಿ, ಕೊಪ್ಪಳದಲ್ಲಿ ಗಂಟಲಿನಲ್ಲಿ ಆಹಾರ ಸಿಲುಕಿದ ಪರಿಣಾಮ ಉಸಿರುಗಟ್ಟಿ ವಿಕಲಚೇತನ ಬಾಲಕನೊಬ್ಬ ಸಾವಿಗೀಡಾಗಿದ್ದಾನೆ. ಮೃತ ಬಾಲಕನನ್ನು 14 ವರ್ಷದ ಆಂಜನೇಯ ಎಂದು ಗುರುತಿಸಲಾಗಿದೆ.

ಕೊಪ್ಪಳ: ಕಂಟೇನರ್ಗೆ ಹಿಂಬದಿಯಿಂದ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು
ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೊಪ್ಪಳ: ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ!
ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.

ಕೊಪ್ಪಳ: ಕಲುಷಿತ ನೀರು ಸೇವನೆಯಿಂದ ಮೃತರ ಸಂಖ್ಯೆ 3ಕ್ಕೆ ಏರಿಕೆ, 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಜಿಲ್ಲಾಡಳಿತ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ
ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದ 10 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಗೆ ತುತ್ತಾಗಿದ್ದ ಬಾಲಕಿ ನಿರ್ಮಲಾ ಈರಪ್ಪ ಗುರುವಾರ ಸಾವನ್ನಪ್ಪಿದ್ದಾಳೆ. ಇದರೊಂದಿಗೆ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

