Koppal

ಸರ್ಕಾರದ ನಿರಾಸಕ್ತಿಗೆ ಬೇಸತ್ತ ಕೊಪ್ಪಳದ 39 ಗ್ರಾಮಗಳು: ಚುನಾವಣೆ ಬಹಿಷ್ಕಾರದ ಬೆದರಿಕೆ
ಹಲವು ವರ್ಷಗಳಿಂದ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ರೈತರು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಏಪ್ರಿಲ್/ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.

ಕೊಪ್ಪಳ: ದಲಿತ ಕುಟುಂಬದ ಮೇಲೆ ಹಲ್ಲೆ, 8 ಮಂದಿ ವಿರುದ್ಧ ಎಫ್ ಐಆರ್ ದಾಖಲು
ಕೊಪ್ಪಳ ಜಿಲ್ಲೆಯ ಹಿಟ್ನಾಳ್ ಗ್ರಾಮದಲ್ಲಿ ದಲಿತ ಕುಟುಂಬದವರನ್ನು ಥಳಿಸಿದ ಆರೋಪದ ಮೇಲೆ ಎಂಟು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಲ್ಲೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

KRPP ಪಕ್ಷದಿಂದ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದ ಜನಾರ್ಧನ ರೆಡ್ಡಿ
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ಧನ ರೆಡ್ಡಿ ಗುರುವಾರ ಐದು ವಿಧಾನಸಭಾ ಕ್ಷೇತ್ರಗಳಿಗೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು.

ಕೊಪ್ಪಳ: ಡಿವೈಡರ್ ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರ ದುರ್ಮರಣ
ವೇಗವಾಗಿ ಬಂದ ಕಾರೊಂದು ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೇತುವೆಯ ಗೋಡೆಗೆ ಗುದ್ದಿದ್ದು ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕೊಪ್ಪಳ: ದಲಿತ ಮಹಿಳೆಗೆ ಚಪ್ಪಲಿಯಿಂದ ಹೊಡೆದ ಮೇಲ್ಜಾತಿ ಪುರುಷ, ಕೇಸು ದಾಖಲು
ತನ್ನ ಜಮೀನಿಗೆ ಜಾನುವಾರು ಬಂದು ಉಪಟಳ ಮಾಡಿದೆ ಎಂದು ಸಿಟ್ಟಿನಿಂದ 30 ವರ್ಷದ ದಲಿತ ಮಹಿಳೆಗೆ ಮೇಲ್ಜಾತಿಯ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಥಳಿಸಿರುವ ಘಟನೆ ನಡೆದಿದೆ.

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ 22 ಲಕ್ಷ ಜೋಳದ ರೊಟ್ಟಿ
ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಭಾನುವಾರದಿಂದ ಆರಂಭವಾಗಿದ್ದು, ಜಾತ್ರೆಯಲ್ಲಿ ಪಾಲ್ಗೊಳ್ಳಲು ಭಕ್ತರ ಸಾಗರವೇ ಹರಿದು ಬರುತ್ತಿದೆ.

ಕೊಪ್ಪಳ: ವಿದ್ಯುತ್ ಸ್ಪರ್ಶಿಸಿ ನೆನಪಿನ ಶಕ್ತಿ ಕಳೆದುಕೊಂಡ 10 ವರ್ಷದ ಬಾಲಕ; ಗುತ್ತಿಗೆದಾರನ ವಿರುದ್ಧ ದೂರು
ಜಿಲ್ಲೆಯ ಕಾರಟಗಿ ತಾಲೂಕಿನ ಮಿಲಾಪುರ ಗ್ರಾಮದಲ್ಲಿ 10 ವರ್ಷದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಆತ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಪ್ರಕರಣಖ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರನ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೊಪ್ಪಳ: ಚಿಕಿತ್ಸೆ ವೆಚ್ಚ ಭರಿಸಲಾಗದೆ ಮಗಳನ್ನು ದೇವದಾಸಿ ಮಾಡಿದ್ದ ಪೋಷಕರ ಬಂಧನ!
22 ವರ್ಷದ ಮಗಳ ವೈದ್ಯಕೀಯ ವೆಚ್ಚವನ್ನು ಭರಿಸಲಾಗದೆ ದಂಪತಿಗಳು ದೇವದಾಸಿ ಪದ್ಧತಿಗೆ ತಳ್ಳಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ, ಈ ಸಂಬಂಧ ಪೊಲೀಸರು ಪೋಷಕರು ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ.

ಕೊಪ್ಪಳ; ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಎಸಗಿದ ವ್ಯಕ್ತಿ ಬಂಧನ, ಸಾಮೂಹಿಕ ಅತ್ಯಾಚಾರದ ಶಂಕೆ
ಕೊಪ್ಪಳ ಜಿಲ್ಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

