ರಾಜಕೀಯಕೊರಗ ಸಮುದಾಯದ ಮೇಲಿನ ಪೊಲೀಸರ ಪ್ರಕರಣ ಅಮಾನವೀಯ, ನಾಚಿಕೆಗೇಡಿನ ಸಂಗತಿ: ಸಿದ್ದರಾಮಯ್ಯ
ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.