ರಾಜ್ಯಬೆಂಗಳೂರಿನ ಪಿಜಿಯಲ್ಲಿ ಯುವತಿ ಹತ್ಯೆ: ಪರಾರಿಯಾಗಿದ್ದ ಆರೋಪಿ ಮಧ್ಯ ಪ್ರದೇಶದಲ್ಲಿ ಬಂಧನ
ಹತ್ಯೆಗೀಡಾದ ಯುವತಿ ಕೃತಿ ಕುಮಾರಿ, ಮೂಲತಃ ಬಿಹಾರ ಮೂಲದವರಾಗಿದ್ದು, ಬೆಂಗಳೂರಿನ ಕೋರಮಂಗಲದ ಪೇಯಿಂಗ್ ಗೆಸ್ಟ್ (ಪಿಜಿ)ನಲ್ಲಿ ವಾಸಿಸುತ್ತಿದ್ದರು. ಮೊನ್ನೆ ಮಂಗಳವಾರ ರಾತ್ರಿ, ವ್ಯಕ್ತಿಯೊಬ್ಬ, ಚಾಕು ಹಿಡಿದುಕೊಂಡು ಬಂದು ರಾತ್ರಿ 11 ಗಂಟೆಯ ಸುಮಾರಿಗೆ ಹಾಸ್ಟೆಲ್ ಗೆ ನುಗ್ಗಿ ಯುವತಿಯ ಕತ್ತು ಸೀಳಿ ಪರಾರಿಯಾಗಿದ್ದಾನೆ.