KPSC recruitment scam

KPSC ಹಗರಣ: ಹೈಕೋರ್ಟ್ ನೇಮಿಸಿದ SIT ಕಂಡರೆ ಸರ್ಕಾರಕ್ಕೆ ಇಷ್ಟೊಂದು ಭಯವೇಕೆ? ಯಾರನ್ನು ರಕ್ಷಿಸಲು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ..?
ಹೈಕೋರ್ಟ್ ಸೆಪ್ಟೆಂಬರ್ 21ರಂದು ಕೆಪಿಎಸ್‌ಸಿ ನೇಮಕಾತಿಯಲ್ಲಿನ ಆರೋಪಿತ ಅಕ್ರಮಗಳ ಕುರಿತು ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಐದು ಮಂದಿ ಅಧಿಕಾರಿಗಳ ಎಸ್‌ಐಟಿ ರಚಿಸಿತ್ತು.

KPSC ನೇಮಕಾತಿ ಹಗರಣ: ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ CID; ಹಣ ವರ್ಗಾವಣೆ, OMR ಶೀಟ್ ತಿರುಚುವಿಕೆ ಬಯಲು!
ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಬಯಸುವ ಅಭ್ಯರ್ಥಿಗಳಿಂದ ಭಾರಿ ಮೊತ್ತದ ಹಣಕ್ಕೆ ಬೇಡಿಕೆ, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಒಎಂಆರ್ ಹಾಳೆಗಳ ತಿರುಚುವಿಕೆ ಕುರಿತಾದ ಆರೋಪಗಳ ಹಿನ್ನೆಲೆಯಲ್ಲಿ ಸಿಐಡಿ ಈ ಹಿಂದೆ ತನಿಖೆಯನ್ನು ಕೈಗೆತ್ತಿಕೊಂಡಿತ್ತು.

ಚಿನ್ನ ಖರೀದಿಗಷ್ಟೇ ಅಲ್ಲ, ಪ್ರೇಯಸಿ ಜೊತೆ ಪ್ರವಾಸಕ್ಕೂ IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ಗೆ ಹಣ ನೀಡಿದ್ದ ಕನ್ನಾಳೆ; CID ತನಿಖೆಯಲ್ಲಿ ಬಯಲು!
ಬೀದರ್‌ನಲ್ಲಿರುವ ತನ್ನ ಮಾಲೀಕತ್ವದ ಭಗವತಿ ಎಂಟರ್‌ರ್ಪ್ರೈಸಸ್ ಮೂಲಕ ಕನ್ನಾಳಿ ಜ್ಞಾನೇಂದ್ರ ಕುಮಾರ್ ಮತ್ತು ಪ್ರೇಯಸಿಗೆ ಟಿಕೆಟ್‌ಗಳನ್ನು ಖರೀದಿಸಿ ನೀಡಿದ್ದಾನೆ.

KPSC ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್, ಕನ್ನಾಳೆ ಜೈಲು ಪಾಲು; 14 ದಿನ ನ್ಯಾಯಾಂಗ ಬಂಧನ
ಪೊಲೀಸ್ ಕಸ್ಟಡಿ ಅಂತ್ಯಗೊಂಡಿದ್ದರಿಂದ ಸಿಐಡಿ ಅಧಿಕಾರಿಗಳು ಬಂಧಿತ ಇಬ್ಬರು ಆರೋಪಿಗಳನ್ನು ಬುಧವಾರ ಕೋರ್ಟ್‌ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!
ಸಿಐಡಿ ತನಿಖೆ ವೇಳೆ ಸ್ಫೋಟ ವಿಚಾರ ಬಯಲಾಗಿದ್ದು, ಎಲ್ಲಾ ಪರೀಕ್ಷೆಗಳ ಉಸ್ತುವಾರಿ ಹಾಗೂ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರೇ ಈ ಪ್ರಶ್ನೆಪತ್ರಿಕೆ ಸೋರಿಕೆಯ ಸೂತ್ರಧಾರ ಅನ್ನೋ ವಿಚಾರ ತಿಳಿದುಬಂದಿದೆ.

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!
ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿತ್ತು.

ಕೆಪಿಎಸ್ ಸಿ ಹಗರಣ: ಸಂಪುಟ ಉಪ ಸಮಿತಿ ರಚಿಸಲು ಕ್ಯಾಬಿನೆಟ್ ತೀರ್ಮಾನ
2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಲ್ಲಿ ಭಾಗಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷರು ಮತ್ತು 9 ಮಂದಿ ಮಾಜಿ ಸದಸ್ಯರನ್ನು ಪ್ರಾಸಿಕ್ಯೂಶನ್ ಒಳಪಡಿಸಬೇಕೇ, ಬೇಡವೇ ಅನ್ನುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ಗೋನಾಳ್ ಭೀಮಪ್ಪ ನನ್ನ ತಂಗಿ ಗಂಡ, ಅವರ ರಕ್ಷಣೆಗೆ ಪ್ರಯತ್ನಿಸುತ್ತೇವೆ: ಸಚಿವ ಎಚ್ ಆಂಜನೇಯ
ಕೆಪಿಎಸ್ ಸಿ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಗೋನಾಳ್ ಭೀಮಪ್ಪ ತಮ್ಮ ತಂಗಿ ಗಂಡನಾಗಿದ್ದು, ಅವರ ರಕ್ಷಣೆಗೆ ಪ್ರಯತ್ನಿಸುತ್ತೇವೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಆಂಜನೇಯ ಹೇಳಿದ್ದಾರೆ..

