ರಾಜ್ಯಕೆಪಿಎಸ್ಸಿ ಪರೀಕ್ಷಾ ಅಭ್ಯರ್ಥಿಗಳ ತಪಾಸಣೆಗೆ ಮಕ್ಕಳ ಬಳಕೆ!
ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ವೃಂದದ ಕಿರಿಯ ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದು, ಈ ವೇಳೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ತಪಾಸಣೆಗೆ ಮಕ್ಕಳನ್ನು ಬಳಕೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.