ದೇಶ370ನೇ ವಿಧಿ ರದ್ದು ವಿಚಾರದಲ್ಲಿ ಪಕ್ಷದ ನಿಲುವು ಒಪ್ಪಲು ಸಾಧ್ಯವಿಲ್ಲ: ಕಾಂಗ್ರೆಸ್ ಗೆ ಮಹಾ ಮಾಜಿ ಸಚಿವ ರಾಜೀನಾಮೆ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ್ದನ್ನು ವಿರೋಧಿಸಿದ್ದ ಪಕ್ಷದ ನಿಲುವು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿ ಮಹಾರಾಷ್ಟ್ರ ಮಾಜಿ ಸಚಿವ ಕೃಪಾಶಂಕರ್ ಸಿಂಗ್ ಅವರು ಮಂಗಳವಾರ ಕಾಂಗ್ರೆಸ್ ರಾಜೀನಾಮೆ ನೀಡಿದ್ದಾರೆ.