Krishna Byre Gowda

ಬರಗಾಲ: ಸಚಿವ ಕೃಷ್ಣ ಬೈರೇಗೌಡ ಉತ್ತರಕ್ಕೆ ಅಸಮಾಧಾನ, ಬಿಜೆಪಿ ಶಾಸಕರಿಂದ ಕಲಾಪ ಬಹಿಷ್ಕಾರ
ಬರಗಾಲದ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನೀಡಿದ ಉತ್ತರಕ್ಕೆ ಅಸಮಾಧಾನಗೊಂಡ ಬಿಜೆಪಿ ಶಾಸಕರು, ಕಲಾಪ ಬಹಿಷ್ಕರಿಸಿದ ಬೆಳವಣಿಗೆಗಳು ಬುಧವಾರ ನಡೆಯಿತು.

ಬಿಆರ್ ಪಾಟೀಲ್ ಪತ್ರದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧರಿಸುತ್ತಾರೆ: ಸಚಿವ ಕೃಷ್ಣ ಬೈರೇಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಆರ್ ಪಾಟೀಲ್ ಅವರು ಪತ್ರ ಬರೆದಿದ್ದು, ಅದರ ಬಗ್ಗೆ ಅವರೇ ನಿರ್ಣಯ ಕೈಗೊಳ್ಳುತ್ತಾರೆಂದು ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.

ಶಾಸಕ ಬಿ ಆರ್ ಪಾಟೀಲ್ ಗೆ ನನ್ನನ್ನು ಬಂದು ಭೇಟಿಯಾಗುವಂತೆ ಹೇಳಿದ್ದೇನೆ: CM Siddaramaiah
ಕೆಲವು ಶಾಸಕರು ಅಸಮಾಧಾನಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮಾಧ್ಯಮಗಳಿಗೆ ಸಿಕ್ಕಿ ಈ ಹಿಂದೆ ಬಹಳ ದೊಡ್ಡ ಸುದ್ದಿಯಾಗಿತ್ತು. ನಂತರ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಶಾಸಕಾಂಗ ಸಭೆ ಕರೆದು ಅಸಮಾಧಾನಿತ ಶಾಸಕರಿಗೆ ಸಮಾಧಾನ, ಬುದ್ಧಿವಾದ ಹೇಳಿದ್ದರು.

ಬಗರ್ ಹುಕುಂ ಯೋಜನೆಯಡಿ ಅಧಿಕ ಬೋಗಸ್ ಅರ್ಜಿಗಳೇ ಸಲ್ಲಿಕೆಯಾಗಿವೆ: ಸಚಿವ ಕೃಷ್ಣ ಬೈರೇಗೌಡ
ಬಗರ್‌ಹುಕುಂ ಯೋಜನೆಯಡಿ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಭೂಮಿಯನ್ನು ಸಕ್ರಮಗೊಳಿಸಲು ಸಲ್ಲಿಕೆಯಾಗಿರುವ ನಕಲಿ ಅರ್ಜಿಗಳನ್ನು ಪತ್ತೆ ಹಚ್ಚಲು ಕಂದಾಯ ಇಲಾಖೆ ಪ್ರಕ್ರಿಯೆ ಆರಂಭಿಸಿದೆ.

ಸಚಿವ ಕೃಷ್ಣ ಬೈರೇಗೌಡರ ಹೇಳಿಕೆಗೆ ಆಳಂದ ಶಾಸಕ ಅಸಮಾಧಾನ: ತಮ್ಮ ವಿರುದ್ಧದ ಆರೋಪಗಳ ತನಿಖೆಗೆ ಒತ್ತಾಯ
ಆಡಳಿತಾರೂಢ ಕಾಂಗ್ರೆಸ್ ನಾಯಕರೊಂದಿಗಿನ ಭಿನ್ನಾಭಿಪ್ರಾಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಆಳಂದ ಶಾಸಕ ಬಿಆರ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಬರ ಪರಿಹಾರ ಮನವಿ ಬಗ್ಗೆ ಶೀಘ್ರ ನಿರ್ಧಾರ ಕೈಗೊಂಡು ನೆರವು ಬಿಡುಗಡೆಗೊಳಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಸಲ್ಲಿಸಲಾಗಿದೆ. ಈ ಸಂಬಂಧ ಶೀಘ್ರ ನಿರ್ಧಾರ ತೆಗೆದುಕೊಂಡು ಬರ ಪರಿಹಾರ ಹಣ ಬಿಡುಗಡೆಗೊಳಿಸಿ ಎಂದು ಕೇಂದ್ರ ಹಣಕಾಸು ಸಚಿವರ ಬಳಿ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಹೇಳಿದರು.

ಡಿಸೆಂಬರ್ ವೇಳೆಗೆ ರೈತರಿಗೆ ಬರ ಪರಿಹಾರ ತಲುಪಿಸಲಾಗುವುದು: ಕಂದಾಯ ಸಚಿವ ಕೃಷ್ಣ ಬೈರೇಗೌಡ
ಬರಗಾಲದಿಂದ ಆಗಿರುವ ಬೆಳೆ ಹಾನಿಗೆ ‘ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿಗಳ ಮಾಹಿತಿ ವ್ಯವಸ್ಥೆ’ (ಫ್ರೂಟ್ಸ್) ದತ್ತಾಂಶದ ಆಧಾರದಲ್ಲೇ ಪರಿಹಾರ ವಿತರಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ಹೇಳಿದರು.

ಮಳೆ ಅವಾಂತರ: ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಸಹಕಾರನಗರ ನಿವಾಸಿಗಳ ಆಕ್ರೋಶ
ನಗರದಲ್ಲಿ ಇತ್ತೀಚೆಗೆ ಸುರಿದ ಮಳೆಗೆ ಹಲವು ಮನೆಗಳು, ಅಂಗಡಿಗಳು, ರಸ್ತೆಗಳು ಜಲಾವೃತಗೊಂಡಿದ್ದರಿಂದ ಸಹಕಾರನಗರದ ನಿವಾಸಿಗಳು ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ಶಾಸಕ ಕೃಷ್ಣ ಬೈರೇಗೌಡರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಬರ: ಕೇಂದ್ರ ತಂಡಕ್ಕೆ ವಸ್ತುಸ್ಥಿತಿ ಮನವರಿಕೆ; ಮನ್ರೇಗಾ ಯೋಜನೆಯ 475 ಕೋಟಿ ರೂ. ಬಾಕಿ ಹಣ ಬಿಡುಗಡೆಗೆ ಒತ್ತಾಯ- ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡವು ಹತ್ತು ದಿನಗಳೊಳಗೆ ವರದಿ ಸಲ್ಲಿಸಲಿದೆ. ಆ ಬಳಿಕ ಪರಿಹಾರದ ಮೊತ್ತ ಖಚಿತವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

