Krishna Byregowda

Shirur Landslide ಪ್ರದೇಶಕ್ಕೆ ಸಚಿವ ಕೃಷ್ಣ ಬೈರೇಗೌಡ ಭೇಟಿ, ಕಾರ್ಯಾಚರಣೆ ಪರಿಶೀಲನೆ
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತ ನಡೆದ ಸ್ಥಳಕ್ಕೆ ಸಚಿವ ಕೃಷ್ಣ ಬೈರೇಗೌಡ ಭಾನುವಾರ ಭೇಟಿ ನೀಡಿದ್ದು, ಕಾರ್ಯಾಚರಣೆ ಪರಿಶೀಲಿಸಿದರು.

ಅಂಕೋಲಾ: NH 66ರಲ್ಲಿ ಗುಡ್ಡ ಕುಸಿತಕ್ಕೆ NHAI 'ಅವೈಜ್ಞಾನಿಕ' ಕಾಮಕಾರಿ ಕಾರಣ!
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದೇ ಇಲ್ಲ. ನಾವು ಏನೇ ಹೇಳಿದರೂ, ನಮ್ಮ ಕೇಂದ್ರ ಕಚೇರಿ ದೆಹಲಿಯಲ್ಲಿದೆ. ಅಲ್ಲಿಗೆ ಪತ್ರ ಬರೆಯುತ್ತೇವೆ ಎಂದಷ್ಟೇ ಹೇಳಿ ಕೈ ತೊಳೆದುಕೊಳ್ಳುತ್ತಾರೆ.

ಉತ್ತರಕಾಶಿ ಟ್ರೆಕ್ಕಿಂಗ್ ದುರಂತ: 5 ಚಾರಣಿಗರ ಮೃತದೇಹ ಬೆಂಗಳೂರಿಗೆ ಆಗಮನ
ಉತ್ತರಾಖಂಡಕ್ಕೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 9 ಮಂದಿ ಹವಾಮಾನ ವೈಪರಿತ್ಯದ ಕಾರಣ ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ಮೃತದೇಹಗಳು ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

ಸಹಸ್ತ್ರತಾಲ್ ದುರಂತ: ಉತ್ತರಾಖಂಡ ಮುಖ್ಯ ಕಾರ್ಯದರ್ಶಿ ಭೇಟಿಯಾದ ಸಚಿವ ಕೃಷ್ಣ ಬೈರೇಗೌಡ, ಶೀಘ್ರದಲ್ಲೇ ಮೃತದೇಹಗಳು ಬೆಂಗಳೂರಿಗೆ ರವಾನೆ!
ಉತ್ತರಾಖಂಡದಲ್ಲಿ ಹವಾಮಾನ ವೈಪರಿತ್ಯ ಹಿನ್ನೆಲೆ ಚಾರಣಕ್ಕೆ ಹೋಗಿದ್ದ 9 ಚಾರಣಿಗರು ಸಾವನ್ನಪ್ಪಿದ್ದಾರೆ. ಚಾರಣಕ್ಕೆ ಹೋಗಿದ್ದ 20 ಕನ್ನಡಿಗರ ಪೈಕಿ 9 ಸಾವನ್ನಪ್ಪಿದ್ದಾರೆ. 9 ಮಂದಿ ಕನ್ನಡಿಗರ ಮೃತದೇಹವನ್ನು ರಾಜ್ಯಕ್ಕೆ ತರಲು ರಾಜ್ಯ ಸರ್ಕಾರದ ಶತಪ್ರಯತ್ನ ನಡೆಸಿದೆ.

ಉತ್ತರಾಖಂಡದಲ್ಲಿ ಕರ್ನಾಟಕ ಮೂಲದ 9 ಚಾರಣಿಗರು ಸಾವು: ನಿಜಕ್ಕೂ ಆಗಿದ್ದೇನು...?
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದವರ ಪೈಕಿ ಕರ್ನಾಟಕದ 9 ಮಂದಿ ಮೃತಪಟ್ಟಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಸಿಲುಕಿರುವ ಹಲವರ ರಕ್ಷಣಾ ಕಾರ್ಯಾಚರಣೆ ಹಿನ್ನೆಲೆ ಕರ್ನಾಟಕದ ಸಚಿವ ಕೃಷ್ಣಬೈರೇಗೌಡ ಅವರು ಉತ್ತರಾಖಂಡಕ್ಕೆ ತೆರಳಿದ್ದಾರೆ.

ಬರ ಪರಿಹಾರ: ರಾಜ್ಯದ ರೈತರಿಗೆ ಸಂದ ಜಯ- ಸಚಿವ ಕೃಷ್ಣ ಬೈರೇಗೌಡ
ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದ್ದು, ಇದು ರಾಜ್ಯದ ರೈತರ ಸಿಕ್ಕ ವಿಜಯವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಹೇಳಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕಾಗಿರುವ ಅನ್ಯಾಯದ ಕುರಿತು ಚರ್ಚೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಚರ್ಚಿಸಲು ಸಿದ್ಧ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು.

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿ ಪ್ರತಿಮೆ ಸ್ಥಾಪಿಸಲು ಅನುಮತಿ
ವಿಧಾನಸೌಧದ ಆವರಣದಲ್ಲಿ ‘ಭುವನೇಶ್ವರಿ ದೇವಿಯ’ ಪ್ರತಿಮೆ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.

ಕುಡಿಯುವ ನೀರು -ಜಾನುವಾರುಗಳ ಮೇವಿನ ಕೊರತೆಯಾಗದಂತೆ ಕ್ರಮ: ಕೃಷ್ಣ ಬೈರೇಗೌಡ
ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಪರಿಸ್ಥಿತಿ ನಿಭಾಯಿಸಲು ಮತ್ತು ಜಾನುವಾರುಗಳಿಗೆ ಮೇವು ಅಭಾವ ತಪ್ಪಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

