Krishna Byregowda

ಬರ ಪರಿಹಾರ: ರಾಜ್ಯದ 33 ಲಕ್ಷ ರೈತರಿಗೆ 628 ಕೋಟಿ ರೂ. ಬಿಡುಗಡೆ- ಕೃಷ್ಣ ಬೈರೇಗೌಡ
ವಿಧಾನಮಂಡಲ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಬರಪೀಡಿತ ರೈತರಿಗೆ ಪರಿಹಾರವಾಗಿ 628 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಘೋಷಿಸಿದ್ದಾರೆ. ಮೊದಲ ಕಂತಿನಲ್ಲಿ ಪ್ರತಿ ಸಂತ್ರಸ್ತ ರೈತರ ಬ್ಯಾಂಕ್ ಖಾತೆಗೆ ರೂ,2,000 ಜಮೆ ಮಾಡಲಾಗಿದೆ.

ಬರ ಪರಿಹಾರ: ವಾರದಲ್ಲಿ ರೈತರಿಗೆ ಮೊದಲ ಕಂತಿನ ಹಣ ಪಾವತಿ
ರಾಜ್ಯ ಸರ್ಕಾರ ಮುಂದಿನ ಒಂದು ವಾರದಲ್ಲಿ 30 ಲಕ್ಷ ರೈತರಿಗೆ ಪರಿಹಾರದ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು.

ಹಳೆ ಪಿಂಚಣಿ ಯೋಜನೆ ಜಾರಿಗೆ ಹಲವು ಅಡೆತಡೆಗಳಿವೆ: ಸಚಿವ ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಂಬಂಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ವರದಿ ನೀಡುವುದು ವಿಳಂಬವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಪರಿಷತ್ತಿಗೆ ಗುರುವಾರ ಹೇಳಿದರು.

ಭೂಮಿ ಮೇಲಿರಿ, ಹಾರಾಡಬೇಡಿ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ
ಬಾಕಿ ಉಳಿದಿರುವ ಕಡತಗಳನ್ನು ತೆರವುಗೊಳಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ತರಾಟೆಗೆ ತೆಗೆದುಕೊಂಡರು.

CM Siddaramaiah ಸಂಧಾನ ಯಶಸ್ವಿ: ಅಧಿವೇಶನಕ್ಕೆ ಹೋಗುತ್ತೇನೆ ಎಂದ ಶಾಸಕ ಬಿಆರ್ ಪಾಟೀಲ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಆಳಂದ ಶಾಸಕ ಬಿಆರ್ ಪಾಟೀಲ್ ಅವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದ್ದು, ಸಿಟ್ಟನ್ನು ಶಮನ ಮಾಡಿದ್ದಾರೆ.

ಡಿಸೆಂಬರ್ ಒಳಗೆ ಇ-ಆಫೀಸ್ ತಂತ್ರಾಂಶ ಅಳವಡಿಕೆಗೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಗಡುವು
ಡಿಸೆಂಬರ್ ಒಳಗೆ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಕಡತಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದಾರೆ.

ಏಪ್ರಿಲ್ ಒಳಗೆ ಶೇ.50ರಷ್ಟು ತಕರಾರು ಪ್ರಕರಣ ಇತ್ಯರ್ಥಗೊಳಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಗಡುವು
ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಶೀಘ್ರಗತಿಯಲ್ಲಿ ಇತ್ಯರ್ಥಗೊಳಿಸುವಂತೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತೆರಿಗೆ ವಂಚನೆ ಮಾಡಬೇಡಿ: ತೆರಿಗೆ ಸಲಹೆಗಾರರಿಗೆ ಸಚಿವ ಕೃಷ್ಣ ಬೈರೇಗೌಡ ಕಿವಿಮಾತು
ತೆರಿಗೆ ವಂಚನೆ ಮಾಡದೆ ಪ್ರಾಮಾಣಿಕವಾಗಿ ಜನರಿಗೆ ಮತ್ತು ಸರ್ಕಾರಕ್ಕೆ ಸೇವೆ ಸಲ್ಲಿಸಿ ಎಂದು ತೆರಿಗೆ ಸಲಹೆಗಾರರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಕಿವಿಮಾತು ಹೇಳಿದರು.

ಭ್ರಷ್ಟಾಚಾರದಲ್ಲಿ ಭಾಗಿ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡ ಕಂದಾಯ ಇಲಾಖೆ!
ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೆಲವೊಂದು ಕ್ರಮಗಳನ್ನು ಕೈಗೊಳ್ಳಲು ಸಚಿವ ಕೃಷ್ಣ ಬೈರೇಗೌಡ ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

