Krishna Reddy

ಬಿಜೆಪಿಯಿಂದ ಅವಿಶ್ವಾಸ ನಿರ್ಣಯಕ್ಕೆ ಸಿದ್ದತೆ ಹಿನ್ನೆಲೆ: ವಿಧಾನಸಭೆ ಉಪಾಧ್ಯಕ್ಷ ಕೃಷ್ಣಾ ರೆಡ್ಡಿ ರಾಜೀನಾಮೆ
ವಿಧಾನಸಭೆ ಉಪಾಧ್ಯಕ್ಷ ಕೃಷ್ಣಾರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೃಷ್ಣಾ ರೆಡ್ಡಿಯವರ ವಿರುದ್ಧ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಳ್ಳಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಜುಗರಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಲಲು ಅವರು ಈ ನಿರ್ಧಾರ ಕೈಗೊಂಡರು.

ಭೂ ಕಬಳಿಕೆ ಮಾಡಿಲ್ಲ: ಆರೋಪ ಮಾಡಿರುವವರ ಮೇಲೆ ಮಾನನಷ್ಟ ಮೊಕದ್ದಮೆ- ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ
ಸರ್ಕಾರಿ ಭೂಮಿ ಕಬಳಿಕೆ ಮಾಡಿರುವುದಾಗಿ ತಮ್ಮ ಮೇಲೆ ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪ ಆಧಾರರಹಿತವಾಗಿದ್ದು, ಅವರ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿ ನ್ಯಾಯಾಲಯದಲ್ಲಿ ಮಾನನಷ್ಟ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ವಿಧಾನಸಭೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆ ಉಪಾಧ್ಯಕ್ಷರಾಗಿ ಚಿಂತಾಮಣಿ ಶಾಸಕ ಕೃಷ್ಣಾರೆಡ್ಡಿ ಆಯ್ಕೆ
ವಿಧಾನ ಸಭೆ ಉಪಾಧ್ಯಕ್ಷ (ಡೆಪ್ಯುಟಿ ಸ್ಪೀಕರ್) ಆಗಿ ಚಿಂತಾಮಣಿ ಶಾಸಕರಾದ ಎಂ. ಕೃಷ್ಣಾರೆಡ್ಡಿ ಆಯ್ಕೆಯಾಗಿದ್ದಾರೆ.

