ರಾಜ್ಯಹಾಸನ: ಎಚ್ ಡಿ ರೇವಣ್ಣ ಆಪ್ತ, ಗ್ರಾನೈಟ್ ಉದ್ಯಮಿ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳ ಬಂಧನ
ಇಡೀ ಹಾಸನ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಗ್ರಾನೈಟ್ ಉದ್ಯಮಿ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಆಪ್ತರಾಗಿದ್ದ ಕೃಷ್ಣೇಗೌಡ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.