KRPP

ವಿಧಾನಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿಯ ಹೊಸ ಪಕ್ಷ ಸದ್ದು ಮಾಡಬಹುದೇ?
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯವಿರುವ ರಾಜ್ಯ ರಾಜಕೀಯ ಕ್ಷೇತ್ರದಲ್ಲಿ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಈಗ ಅಂಬೆಗಾಲು ಇಡುತ್ತಿರಬಹುದು ಆದರೆ, 2028 ರ ವೇಳೆಗೆ ಆಡಳಿತಕ್ಕೆ ಬರುವಷ್ಟು ದೊಡ್ಡದಾಗಿ ಬೆಳೆಯುತ್ತದೆ ಎಂಬ ವಿಶ್ವಾಸದಲ್ಲಿದ್ದಾರೆ.

ಅಧಿಕಾರಕ್ಕೆ ಬಂದಿದ್ದೇ ಆದರೆ, ಕೆಆರ್‌ಪಿಪಿಯಿಂದ ಸಕಾರಾತ್ಮಕ ಬದಲಾವಣೆ: ಗಾಲಿ ಜನಾರ್ಧನ ರೆಡ್ಡಿ
ಹಿಂದಿನ ಹಾಗೂ ಈಗಿನ ಸರ್ಕಾರಗಳ ಒಂದೇ ರೀತಿಯ ಆಡಳಿತದಿಂದಾಗಿ ಜನರು ಬೇಸತ್ತು ಹೋಗಿದ್ದು, ಸಕಾರಾತ್ಮಕ ಬದಲಾವಣೆಯನ್ನು ಬಯಸಿದ್ದಾರೆ. ಹೀಗಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ)ವನ್ನು ಅಧಿಕಾರಕ್ಕೆ ತರಲು ಮುಂದಾಗಿದ್ದಾರೆಂದು ಎಂದು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರು ಶುಕ್ರವಾರ ಹೇಳಿದರು.

ನಾಯಕರ ವಿರುದ್ಧ ಸೇಡು ತೀರಿಸಿಕೊಳ್ಳಲು ರಾಜಕಾರಣಕ್ಕೆ ಬರಲಿಲ್ಲ: ಗಾಲಿ ಜನಾರ್ಧನ ರೆಡ್ಡಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ನಿರ್ಣಾಯಕ ಪಾತ್ರವಹಿಸಲಿದ್ದು, ನಮ್ಮ ಪಕ್ಷದ ಬೆಂಬಲವಿಲ್ಲದೆ, ರಾಜ್ಯದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಹೊಸ ಸರ್ಕಾರವನ್ನು ರಚನೆ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಅವರು ಭಾನುವಾರ ಹೇಳಿದರು.

ಕೆಆರ್‌ಪಿಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ರೈತರಿಗೆ ಪ್ರತೀ ವರ್ಷ ರೂ.15 ಸಾವಿರ ನೆರವು: ಜನಾರ್ಧನ ರೆಡ್ಡಿ ಘೋಷಣೆ
ಇತ್ತೀಚೆಗಷ್ಟೇ ತಮ್ಮದೇ ರಾಜಕೀಯ ಪಕ್ಷ ಆರಂಭಿಸಿದ್ದ ಬಿಜೆಪಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು, ಕರ್ನಾಟಕದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ರಾಜ್ಯದ ಪ್ರತೀ ರೈತ ಕುಟುಂಬಕ್ಕೆ ವಾರ್ಷಿಕ 15 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಭಾನುವಾರ ಘೋಷಿಸಿದ್ದಾರೆ.

ನನ್ನ ವಿರುದ್ಧ ಪತ್ನಿಯ ಕಣಕ್ಕಿಳಿಸಿದ್ದಾನೆ, ಬಳ್ಳಾರಿಯಿಂದಲೇ ಸ್ಪರ್ಧಿಸಿ ಗೆಲವು ಸಾಧಿಸುತ್ತೇನೆ: ಜನಾರ್ಧನ ರೆಡ್ಡಿ ವಿರುದ್ಧ ತೊಡೆ ತಟ್ಟಿದ ಸೋಮಶೇಖರ್ ರೆಡ್ಡಿ
ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಥಾಪಿಸಿರುವ ಕೆಆರ್‌ಪಿಪಿ ಪಕ್ಷದಿಂದ ಜನಾರ್ದನ ರೆಡ್ಡಿ ಅವರ ಪತ್ನಿ ಗಾಲಿ ಲಕ್ಷ್ಮೀ ಅರುಣಾ ಅವರು ಬಳ್ಳಾರಿ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಎಂದು ಘೋಷಣೆ ಆಗಿರುವ ಹಿನ್ನೆಲೆ ಸೋಮಶೇಖರ್ ರೆಡ್ಡಿಯವರು ಅಸಮಾಧಾನ ಹೊರಹಾಕಿದ್ದಾರೆ.

ಸಂಕ್ರಾಂತಿ ಬಳಿಕ ತಮ್ಮ ಪಕ್ಷದ ಪ್ರಣಾಳಿಕೆ ಪ್ರಕಟಿಸಲು ಗಾಲಿ ಜನಾರ್ದನ ರೆಡ್ಡಿ ನಿರ್ಧಾರ
ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರುವ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಪಕ್ಷದ ಪ್ರಣಾಳಿಕೆ ಮತ್ತು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ 16ರ ನಂತರ ಪ್ರಕಟಿಸುವುದಾಗಿ ಬುಧವಾರ ಘೋಷಿಸಿದ್ದಾರೆ.

