KRS

ಕೆಆರ್‌ಎಸ್‌ನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿಷೇಧ
ಕೆಆರ್‌ಎಸ್ ಸುತ್ತಲೂ ಗಣಿಗಾರಿಕೆ ನಿಷೇಧಿಸುವಂತೆ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಆದೇಶ ಹೊರಡಿಸಲಾಗಿದೆ.

ಕೆಆರ್‌ಎಸ್ ಜಲಾಶಯ ಕಾಮಗಾರಿ ಪರಿಶೀಲಿಸಿದ ಕೇಂದ್ರದ ನಿಯೋಗ
ಕೃಷ್ಣರಾಜಸಾಗರ ಜಲಾಶಯದಲ್ಲಿ ನಡೆಯುತ್ತಿರುವ ಪುನಶ್ಚೇತನ ಕಾಮಗಾರಿ ಬಗ್ಗೆ ತಿಳಿಯಲು ಕೇಂದ್ರದ ಸಂಸದೀಯ ಸ್ಥಾಯಿ ಸಮಿತಿ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

KRS ಅಣೆಕಟ್ಟು ಸುತ್ತಮುತ್ತ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿರ್ಬಂಧ: ಹೈಕೋರ್ಟ್ ಮಹತ್ವದ ಆದೇಶ
ಕೆಆರ್‌ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೃಷ್ಣರಾಜಸಾಗರ ಅಣೆಕಟ್ಟೆಯ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಲಾಗಿದೆ

ಕಾವೇರಿ ವಿವಾದ: ಕೆಆರ್'ಎಸ್ ಗೆ ಮುತ್ತಿಗೆ ಹಾಕಲು ಕನ್ನಡಪರ ಹೋರಾಟಗಾರರ ಯತ್ನ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನ ಸಾವಿರಾರು ಕನ್ನಡಪರ ಕಾರ್ಯಕರ್ತರು ಗುರುವಾರ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ: ಕೆಆರ್'ಎಸ್ ಡ್ಯಾಮ್ ನಲ್ಲಿ 100 ಅಡಿ ದಾಟಿದ ನೀರಿನ ಸಂಗ್ರಹ
ಕಳೆದ 3 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾಗುತ್ತಿದ್ದು, ಇದರ ಪರಿಣಾಮ ಕೆಆರ್'ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.

ಒತ್ತಡ, ವಿರೋಧಕ್ಕೆ ಮಣಿದ ಸರ್ಕಾರ: ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಪ್ರಮಾಣದಲ್ಲಿ ಇಳಿಕೆ!
ಮಳೆ ಅಭಾವದಿಂದಾಗಿ ರಾಜ್ಯ ಸಂಕಷ್ಟದಲ್ಲಿದ್ದರೂ, ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿರೋಧ ಪಕ್ಷ ಹಾಗೂ ರೈತರಿಂದ ತೀವ್ರ ವಿರೋಧಗಳು ವ್ಯಕ್ತವಾದ ಬೆನ್ನಲ್ಲೇ, ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಮಟ್ಟವನ್ನು ಇಳಿಕೆ ಮಾಡಿದೆ.

ಕೆಆರ್ ಎಸ್ , ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ಹರಿದ ಕಾವೇರಿ, ಕೆರಳಿದ ರೈತರು!
ನೀರಾವರಿ ಇಲಾಖೆ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳ ಜಲಾನಯನ ಪ್ರದೇಶಕ್ಕೆ ನೀರು ಬಿಡುವುದರ ಬದಲು ತಮಿಳುನಾಡಿಗೆ ಹರಿಸಿದೆ. ಇದರಿಂದ ಕೆರಳಿರುವ ರೈತರು ಈ ನಿರ್ಧಾರ ತಮ್ಮ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಬಿನಿ ಜಲಾಶಯ ಬಹುತೇಕ ಭರ್ತಿ; ಕೆಆರ್‌ಎಸ್ ಒಳಹರಿವಿನಲ್ಲಿ ಹೆಚ್ಚಳ
ಕೇರಳದ ವಯನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಜಲಾಶಯದ ಮಟ್ಟ 2,281.27 ಅಡಿಗಳಿಗೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮಳೆ ಕೊರತೆ: 77 ಅಡಿಗೆ ಕುಸಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದಾಗಿ ಕೃಷ್ಣರಾಜಸಾಗರ ಅಣೆಕಟ್ಟೆಯಲ್ಲಿ ಗರಿಷ್ಠ 124.80 ಅಡಿ ಇದ್ದ ನೀರಿನ ಮಟ್ಟ 77.68 ಅಡಿಗೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

