KRS

ರಾಜ್ಯದಲ್ಲಿ ಕಾಂಗ್ರೆಸ್ ಬಂದರೆ ಬರಗಾಲ, ಬಿಜೆಪಿ ಬಂದರೆ ಅತಿವೃಷ್ಟಿ? ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 80 ಅಡಿಗೆ ಕುಸಿತ!
ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಬೇಸಿಗೆಯ ಬಿಸಿಲು, ಪೂರ್ವ ಮುಂಗಾರು ಮಳೆ ವಿಳಂಬದಿಂದಾಗಿ ಮಂಡ್ಯದ ಕೃಷ್ಣ ರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ.

ಬೇಬಿ ಬೆಟ್ಟದಲ್ಲಿ ಪರೀಕ್ಷಾರ್ಥ ಸ್ಫೋಟ: ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಆಕ್ಷೇಪ, ಡಿಸಿಗೆ ಪತ್ರ
ಕೃಷ್ಣರಾಜಸಾಗರ ಅಣೆಕಟ್ಟಿಗೆ ಅಪಾಯ ತಂದೊಡ್ಡುತ್ತಿದೆ ಎಂದು ಹೇಳಲಾಗುತ್ತಿರುವ ಬೇಬಿ ಬೆಟ್ಟದಲ್ಲಿನ ಪರೀಕ್ಷಾರ್ಥ ಸ್ಫೋಟವನ್ನು ಕೂಡಲೇ ನಿಲ್ಲಿಸುವಂತೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ವರುಣನ ಆರ್ಭಟ: ಕೆಆರ್‌ಎಸ್, ಕಬಿನಿ ಜಲಾಶಯಗಳಿಂದ ನೀರು ಬಿಡುಗಡೆ
ಕೊಡಗು ಜಿಲ್ಲೆ ಮತ್ತು ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ ಮತ್ತು ಕೆಆರ್‌ಎಸ್ ಜಲಾಶಯಗಳಿಂದ ತಮಿಳುನಾಡಿಗೆ ನೀರಾವರಿ ಇಲಾಖೆ ನೀರು ಬಿಡುಗಡೆ ಮಾಡಿದೆ.

ಕೆಆರ್ ಎಸ್ ಜಲಾಶಯ ಭರ್ತಿ: ತಮಿಳುನಾಡಿನ ಕ್ಯಾತೆಯಿಂದಾಗಿ ರೈತರಿಗಿಲ್ಲ ನೀರು!
ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ, ಕೆ ಆರ್ ಎಸ್ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.

ಐತಿಹಾಸಿಕ ಕೆಆರ್ ಎಸ್ ಡ್ಯಾಂನ ಮೆಟ್ಟಿಲುಗಳು ಕುಸಿತ; ಜಲಾಶಯದ ಬಳಿ ಆತಂಕದ ವಾತಾವರಣ; ಶಾಸಕ ರವೀಂದ್ರ ಶ್ರೀಕಂಠಯ್ಯ ಭೇಟಿ
ಕೃಷ್ಣರಾಜ ಸಾಗರ ಅಣೆಕಟ್ಟಿನಲ್ಲಿ ಬಿರುಕು ಎಂಬ ವಿವಾದ ತಣ್ಣಗಾಗುತ್ತಿರುವ ಹೊತ್ತಿನಲ್ಲೇ ಡ್ಯಾಂನ ಮೆಟ್ಟಿಲಿನ ಗೋಡೆಯಿಂದ ಕಲ್ಲು ಕುಸಿತವಾಗಿ ಆತಂಕವನ್ನುಂಟು ಮಾಡಿದೆ.

ಹೆಚ್'ಡಿಕೆ-ಸುಮಲತಾ ಸಂಘರ್ಷದ ನಡುವಲ್ಲೇ ಕೆಆರ್'ಎಸ್ ಅಣೆಕಟ್ಟು ಸುರಕ್ಷಿತವಾಗಿದೆ ಎಂದ ರಾಜ್ಯ ಸರ್ಕಾರ!
ಕೆಆರ್‌ಎಸ್ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಮಧ್ಯೆ ಮಾತಿನ ಸಮರ ಮುಂದುವರೆದಿದ್ದು, ಈ ನಡುವಲ್ಲೇ ಅಣೆಕಟ್ಟು ಸುರಕ್ಷಿತವಾಗಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ.

ಮಂಡ್ಯದ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ವಹಿಸಬೇಕು: ಸಂಸದೆ ಸುಮಲತಾ ಒತ್ತಾಯ
ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮುಖ್ಯಮಂತ್ರಿಗಳ ಬಳಿ ಒತ್ತಾ ಯಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.

ಕೋವಿಡ್-19: ಕೆಆರ್ ಎಸ್ ಬೃಂದಾವನ ಭೇಟಿಗೆ ಸದ್ಯಕ್ಕೆ ಅವಕಾಶವಿಲ್ಲ
ಕೊರೋನಾ ವೈರಸ್ ಕಾರಣದಿಂದಾಗಿ ಕೃಷ್ಣರಾಜ ಸಾಗರ ಜಲಾಶಯದಲ್ಲಿರುವ ವಿಶ್ವಪ್ರಸಿದ್ಧ ಬೃಂದಾವನ ಉದ್ಯಾನ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿಲ್ಲವಾದ ಕಾರಣ, ಸದ್ಯಕ್ಕೆ ಪ್ರವಾಸಿಗರ ಭೇಟಿಗೆ ಅವಕಾಶ ಇಲ್ಲದಂತಾಗಿದೆ.

ಮೇಕೆದಾಟು ಯೋಜನೆಗೆ ಸರ್ಕಾರ ಬದ್ಧವಾಗಿದೆ:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ಮೇಕೆದಾಟು ಜಲಾಶಯ ಮತ್ತು ಕೃಷ್ಣ ರಾಜ ಸಾಗರ ಮತ್ತು ಮೆಟ್ಟೂರು ಜಲಾಶಯಗಳ ನಡುವೆ ಕುಡಿಯುವ ನೀರಿನ ಯೋಜನೆಗಳಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ.

