ರಾಜ್ಯಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರು ವಶಕ್ಕೆ
ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು, ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡಿದ್ದಾರೆ.