KSCA

News headlines 05-06-2025 | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ: ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ನೊಟೀಸ್; ವಿಜಯೋತ್ಸವವನ್ನು ಆಯೋಜಿಸಲು ರಾಜ್ಯ ಸರ್ಕಾರ KSCA ಗೆ ಹೇಳಿರಲಿಲ್ಲ- ಗೃಹ ಸಚಿವ

IPL 2024: ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೆ ಸಂಕಷ್ಟ; ಮೈದಾನದ ನೀರಿನ ಎಲ್ಲ ಮೂಲಗಳ ವಿವರ ಕೇಳಿದ NGT
ರಾಜ್ಯದಲ್ಲಿ ಭೀಕರ ಬರಗಾಲ ಮತ್ತು ತೀವ್ರ ನೀರಿನ ಕೊರತೆಯ ಹೊರತಾಗಿಯೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜನೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಮೈದಾನದ ನೀರಿನ ಎಲ್ಲ ಮೂಲಗಳ ವಿವರ ನೀಡುವಂತೆ ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ಸೂಚಿಸಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಸ್ಟಾಂಡ್ಗಳಿಗೆ ಮೂವರು ಕ್ರಿಕೆಟ್ ದಿಗ್ಗಜರ ಹೆಸರು ಇಡುವಂತೆ ಸಿಎಂ ಮನವಿ
ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟಾಂಡ್ಗಳಿಗೆ ರಾಜ್ಯದ ದಿಗ್ಗಜ ಕ್ರಿಕೆಟಿಗರಾದ ಇಎಎಸ್ ಪ್ರಸನ್ನ, ಜಿ.ಆರ್.ವಿಶ್ವನಾಥ್ ಮತ್ತು ಬಿ.ಎಸ್.ಚಂದ್ರಶೇಖರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

58 ವಯಸ್ಸಿಗೆ ನಿವೃತ್ತಿ ನೀಡಿದ ಕೆಎಸ್‌ಸಿಎಗೆ ಹೈಕೋರ್ಟ್ ನೋಟಿಸ್
ರಾಜ್ಯ ಸರ್ಕಾರವು ನಿವೃತ್ತಿ ವಯಸ್ಸನ್ನು 60ಕ್ಕೆ ಹೆಚ್ಚಿಸಿದ್ದರೂ 58ನೇ ವಯಸ್ಸಿಗೆ ನೌಕರರೊಬ್ಬರನ್ನು ನಿವೃತ್ತಿಗೊಳಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಭಾರತ vs ದಕ್ಷಿಣ ಆಫ್ರಿಕಾ 5ನೇ ಟಿ20 ಪಂದ್ಯ ರದ್ದು: ವೀಕ್ಷಕರಿಗೆ ಟಿಕೆಟ್ ನ ಶೇ.50ರಷ್ಟು ಹಣ ಪಾವತಿಗೆ KSCA ನಿರ್ಧಾರ
ಜೂನ್ 19 ರಂದು ನಡೆದಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಮಳೆ ಕಾರಣದಿಂದಾಗಿ ರದ್ದಾದ ಹಿನ್ನಲೆಯಲ್ಲಿ ಪ್ರೇಕ್ಷಕರ ಟಿಕೆಟ್ ಹಣದಲ್ಲಿ ಶೇ.50ರಷ್ಟು ಮರು ಪಾವತಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ನಿರ್ಧರಿಸಿದೆ.

ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣ; ಸ್ಥಳೀಯ ಪ್ರತಿಭೆಗಳಿಗೆ ಸಹಾಯ
ಗಣಿ ನಾಡು ಬಳ್ಳಾರಿಯಲ್ಲಿ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣವಾಗಲಿದ್ದು, ಇದರಿಂದ ಸ್ಥಳೀಯ ಕ್ರಿಕೆಟ್ ಪ್ರತಿಭೆಗಳಿಗೆ ನೆರವಾಗಲಿದೆ.

ಕೋವಿಡ್-19 ವಿರುದ್ಧ ಸಮರ: 1 ಕೋಟಿ ರೂ. ದೇಣಿಗೆ ನೀಡಿದ ಕೆಎಸ್‌ಸಿಎ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 51 ಕೋಟಿ ನೀಡಿದ ಬೆನ್ನಲ್ಲೆ ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ತಲಾ 50 ಲಕ್ಷ ರೂ. ಸೇರಿದಂತೆ ಒಟ್ಟು ಒಂದು ಕೋಟಿ ರೂ.ಗಳ ದೇಣಿಗೆ ನೀಡಿದೆ.

ಕ್ರಿಕೆಟ್ ಅಭಿಮಾನಿಗಳಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 50 ಸಾವಿರ ದಂಡ ವಿಧಿಸಿದ ಬಿಬಿಎಂಪಿ!
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಭರ್ಜರಿ ಗೆಲುವು ಸಾಧಿಸಿ, ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಇದೀಗ ಬಿಬಿಎಂಪಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ಸಿಎ)ಗೆ 50 ಸಾವಿರ ರುಪಾಯಿ ದಂಡ ವಿಧಿಸಿದೆ.

ಕೆಪಿಎಲ್ ಬೆಟ್ಟಿಂಗ್: ಸಂತೋಷ್ ಮೆನನ್ ನಿವಾಸದ ಮೇಲೆ ಸಿಸಿಬಿ ದಾಳಿ
ಕರ್ನಾಟಕ ಪ್ರಿಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಸಿ ಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ದಾಳಿ ನಡೆಸಿ, ಶೋಧ ನಡೆಸಲಾಗಿದೆ.

