KSRTC

ಬೆಂಗಳೂರು: ಚಲಿಸುತ್ತಿದ್ದ ಬಸ್ ನಿಂದ ವಿದ್ಯಾರ್ಥಿನಿಯನ್ನು ಹೊರದಬ್ಬಿದ ಕಂಡಕ್ಟರ್
ವಿದ್ಯಾರ್ಥಿನಿಯು ಬಸ್ ಪಾಸ್ ಹೊಂದಿದ್ದು, ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿದಳೆಂಬ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕ ವಿದ್ಯಾರ್ಥಿನಿಯನ್ನು ಚಲಿಸುವ ಬಸ್‌ನಿಂದ ಹೊರಕ್ಕೆ ದಬ್ಬಿದ್ದಾನೆ, ವಿದ್ಯಾರ್ಥಿನಿಗೆ ಹಲವು ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ.

ಅಯೋಧ್ಯೆ ತೀರ್ಪು ಪ್ರಕಟ: ಕೆಎಸ್ಆರ್ ಟಿಸಿಯಿಂದ ಮುಂಜಾಗ್ರತಾ ಕ್ರಮ
ಅಯೋಧ್ಯೆ ತೀರ್ಪು ಹಿನ್ನಲೆಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜಾಗರೂಕತೆ ವಹಿಸುವಂತೆ ಪ್ರಯಾಣಿಕರಿಗೆ ಸೂಚಿಸಿದೆ. ಒಂದು ವೇಳೆ ಅಹಿತಕರ ಘಟನೆ ಕಲ್ಲು ತೂರಾಟ ನಡೆದರೆ ಬಸ್ ಸಂಚಾರ ಸ್ಥಗಿತಗೊಳಿಸುವ ಸಾಧ್ಯತೆಯಿದೆ.

ಪಲ್ಟಿ ಹೊಡೆದ ಕೆಎಸ್ಆರ್'ಟಿಸಿ ಬಸ್: 2 ವರ್ಷದ ಮಗು ದಾರುಣ ಸಾವು
ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಪಲ್ಟಿಯಾದ ಪರಿಣಾಮ 2 ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪ ನಡೆದಿದೆ.

ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸು ಪಲ್ಟಿ; ಹಲವು ಪ್ರಯಾಣಿಕರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬಳಿಕ ಉರುಳಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ.

ದೀಪಾವಳಿಗಾಗಿ ಕೆಎಸ್ ಆರ್ ಟಿಸಿಯಿಂದ 1,600 ಹೆಚ್ಚುವರಿ ಬಸ್ ವ್ಯವಸ್ಥೆ
ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‍ಆರ್ ಟಿಸಿ 1,600 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ.

ದಸರಾಗೆ ಕೆಎಸ್ಆರ್ ಟಿಸಿಯಿಂದ ವಿಶೇಷ ಪ್ಯಾಕೆಜ್ ಸೇವೆ
ಮೈಸೂರು ದಸರಾ ವೀಕ್ಷಣೆಗೆ ಹೋಗುವವರಿಗೆ ಈ ವರ್ಷ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ ಟಿಸಿ)ರಾಜಹಂಸ, ಐರಾವತ ಮತ್ತು ಐರಾವತ ಕ್ಲಬ್ ದರ್ಜೆಯ ಹೆಚ್ಚುವರಿ ಬಸ್ ಸೇವೆ ನೀಡಲಿದೆ.

ಗಣೇಶ ಚತುರ್ಥಿಗೆ ಕೆಎಸ್ ಆರ್ ಟಿಸಿಯಿಂದ ಹೆಚ್ಚುವರಿ ಬಸ್ ಸೌಲಭ್ಯ: ಮುಂಗಡ ಬುಕ್ಕಿಂಗ್ ಗೆ ರಿಯಾಯಿತಿ
ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿ 1800 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ರಾಜ್ಯಗಳಿಗೆ ಈ ಬಸ್‌ಗಳು ಸಂಚಾರ ನಡೆಸಲಿವೆ.

ಕೆಎಸ್‌ಆರ್‌ಟಿಸಿ ಅಂಬಾರಿ ಡ್ರೀಮ್ ಕ್ಲಾಸ್ ಸೇವೆಗೆ ಏಷ್ಯಾ ಬ್ರಾಂಡ್ ಎಕ್ಸಲೆನ್ಸ್ ಪ್ರಶಸ್ತಿ
ಕೆಎಸ್ಆರ್ ಟಿಸಿಯು ಇತ್ತೀಚೆಗೆ ನೂತನವಾಗಿ ಕಾರ್ಯಾಚರಣೆಗೊಳಿಸಿರುವ ಬಸ್ಸಿನ ಬ್ರಾಂಡ್ "ಅಂಬಾರಿ ಡ್ರೀಮ್ ಕ್ಲಾಸ್ - ಕನಸಿನೊಂದಿಗೆ ಪ್ರಯಾಣಿಸಿ " ಉಪಕ್ರಮವು ಅಂತಾರಾಷ್ಟ್ರೀಯ ಸಿ ಎಮ್ ಒ ಬ್ರಾಡಿಂಗ್ ಎಕ್ಸ್ ಲೆನ್ಸ್ ಸಪ್ಲೈ ಚೈನ್ ಆಂಡ್..

ಅತಿವೃಷ್ಠಿ, ಪ್ರವಾಹದಿಂದ ಕೆಎಸ್ಆರ್‌ಟಿಸಿಗೆ 3.30 ಕೋಟಿ ರೂ. ನಷ್ಟ
ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಪ್ರವಾಹ ಹಾಗೂ ಅತಿವೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 3.30 ಕೋಟಿ ರೂ ನಷ್ಟ ಸಂಭವಿಸಿದೆ. ಮೊದಲೇ ನಷ್ಟದಲ್ಲಿದ್ದ ಇಲಾಖೆಗೆ ಪ್ರಾಕೃತಿಕ ವಿಕೋಪವು ಮತ್ತಷ್ಟು ಆರ್ಥಿಕ ಸಂಕಷ್ಟ ತಂದೊಡ್ಡಿದೆ.

