Kukke Subrahmanya

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ಉಕ್ಕಿ ಹರಿಯುತ್ತಿರುವ ದರ್ಪಣ ತೀರ್ಥ ನದಿ, ಸೇತುವೆ ಮುಳುಗಡೆ..!
ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಯಿಂದ ದರ್ಪಣ ತೀರ್ಥ ನದಿ ಉಕ್ಕಿ ಹರಿದು, ಆದಿ ಸುಬ್ರಹ್ಮಣ್ಯ ದೇವಸ್ಥಾನದ ಆವರಣಕ್ಕೆ ನೀರು ನುಗ್ಗಿತು.

News headlines 14-05-2025 | ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ರೌಡಿ ಶೀಟರ್ ಅಧ್ಯಕ್ಷ; ಇನ್ನು ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ; ಬಿಡದಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಶವ ಪತ್ತೆ!

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವಾರ್ಷಿಕ ಆದಾಯ ಏರಿಕೆ
ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

ಬೆಂಗಳೂರು-ಕುಕ್ಕೆ ಸುಬ್ರಹ್ಮಣ್ಯ ನಡುವೆ ಏಪ್ರಿಲ್ 12ರಿಂದ ರೈಲು ಸಂಚಾರ ಆರಂಭ: ಕೇಂದ್ರ ಸಚಿವ ವಿ.ಸೋಮಣ್ಣ
23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ.

ಸುಬ್ರಹ್ಮಣ್ಯ: ಟ್ರೆಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಯುವಕನನ್ನು ಉಳಿಸಿದ ಕುಕ್ಕೆ ದೇವರ ತೀರ್ಥ!
ಬೆಂಗಳೂರಿನಿಂದ ಚಾರಣಕ್ಕಾಗಿ ಮಡಿಕೇರಿ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದ್ದ 12 ಯುವಕರ ತಂಡದಲ್ಲಿ ನಾಪತ್ತೆಯಾಗಿದ್ದ ಯುವಕ ಒಂದೂವರೆ ದಿನಗಳ ನಂತರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಹೀಗೆ ಯುವಕ ಸುರಕ್ಷಿತವಾಗಿ ಕುಕ್ಕೆಗೆ ಸೇರುವಂತೆ ಮಾಡಿದ್ದು ದೇವರ ತೀರ್ಥದ ಪೈಪ್ ಎನ್ನುವುದು ಗಮನಾರ್ಹ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಸಿಡಿಲು ಬಡಿದು ಓರ್ವ ಸಾವು!
ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಭಾರೀ ಮಳೆಯಾಗಿದ್ದು ಸಿಡಿಲಿನ ಹೊಡೆತಕ್ಕೆ ಓರ್ವ ಸಾವನ್ನಪ್ಪಿದ್ದಾನೆ.

ಎರಡು ಗುಂಪುಗಳ ಮಧ್ಯೆ ಘರ್ಷಣೆ: ಇಂದು ಕುಕ್ಕೆ ಸುಬ್ರಹ್ಮಣ್ಯ ಬಂದ್
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನಲ್ಲಿರುವ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಠ ಮತ್ತು ದೇವಸ್ಥಾನ...

