ವಿದೇಶಕುಲಭೂಷಣ್ ಜಾಧವ್ ಕೇಸಿನಲ್ಲಿ ಪಾಕಿಸ್ತಾನ ವಿಯೆನ್ನಾ ಒಪ್ಪಂದವನ್ನು ಉಲ್ಲಂಘಿಸಿದೆ: ಅಂತಾರಾಷ್ಟ್ರೀಯ ಕೋರ್ಟ್
ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಭಾರತದ ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪ್ರಕರಣದಲ್ಲಿ ವಿಯೆನ್ನಾ ಒಪ್ಪಂದದಡಿ ಜವಾಬ್ದಾರಿಗಳನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯದ ಅಧ್ಯಕ್ಷ ನ್ಯಾಯಾಧೀಶ ಅಬ್ದುಲ್ಕಾವಿ ಯೂಸುಫ್ ವಿಶ್ವಸಂಸ್ಥೆಗೆ ತಿಳಿಸಿದ್ದಾರೆ.